BREAKING NEWS

ರಾಜ್ಯದಲ್ಲಿ ಗ್ರಾಮೀಣ ನೀರು ಸರಬರಾಜಿಗೆ ವಿಶ್ವಬ್ಯಾಂಕ್‌ನಿಂದ 3,000 ಕೋಟಿ ರೂ. ನೆರವು

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕರ್ನಾಟಕ ಸರಕಾರದ ಪ್ರಸ್ತಾವಿತ ಯೋಜನೆಗೆ ವಿಶ್ವಬ್ಯಾಂಕ್‌ 363 ಮಿಲಿಯನ್‌ ಡಾಲರ್‌ (ಸುಮಾರು 3,000 ಕೋಟಿ ರೂ.) ಸಾಲ ನೀಡಲು ಸಮ್ಮತಿಸಿದೆ.
ರಾಜ್ಯದ 31 ಜಿಲ್ಲೆಗಳ ಮನೆ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಮೂಲಕ ಒಂದು ಕೋಟಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ. ನೀರಿನ ಸಂಪರ್ಕ ಜಾಲ ವಿಸ್ತರಿಸಿ ಸಮರ್ಪಕವಾಗಿ ನೀರು ಹಂಚಿಕೆ ಮಾಡಲು ವಿಶ್ವ ಬ್ಯಾಂಕ್‌ ಸಾಲ ಸೌಲಭ್ಯ ಕಲ್ಪಿಸಿದೆ.
ವಿಶ್ವ ಬ್ಯಾಂಕ್‌ ನಿರ್ದೇಶಕರ ಕಾರ್ಯಕಾರಿ ಮಂಡಳಿ 363 ದಶಲಕ್ಷ ಡಾಲರ್‌ ಮೊತ್ತದ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಕರ್ನಾಟಕದ ಶೇ. 77ರಷ್ಟು ಭಾಗ ಒಣ ಭೂಮಿಯಿಂದ ಕೂಡಿದೆ. ಹವಾಮಾನ ವೈಪರೀತ್ಯದಿಂದ ಕೆಲವು ಸಲ ಬರಗಾಲ, ಕೆಲವು ಬಾರಿ ಪ್ರವಾಹ, ಪ್ರಕೋಪಗಳಿಗೆ ತುತ್ತಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿಅಂತರ್ಜಲ ಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿದು, ನೀರಿನ ಗುಣಮಟ್ಟವೂ ಕ್ಷಿಣಿಸಿದೆ. ಹೀಗಾಗಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕರ್ನಾಟಕದ ಪ್ರಸ್ತಾವಿತ ಯೋಜನೆಗೆ ಸಮ್ಮತಿ ನೀಡಲಾಗಿದೆ ಎಂದು ವಿಶ್ವ ಬ್ಯಾಂಕ್‌ ತಿಳಿಸಿದೆ.
“ಭಾರತದ ಗ್ರಾಮೀಣ ಭಾಗದ ಮನೆಗಳಿಗೆ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಅಗತ್ಯ ಆರ್ಥಿಕ ಸಹಕಾರ ನೀಡಲಾಗುವುದು,” ಎಂದು ವಿಶ್ವ ಬ್ಯಾಂಕ್‌ನಲ್ಲಿ ಭಾರತದ ನಿರ್ದೇಶಕರಾಗಿರುವ ಅಗಸ್ಟೆ ಟ್ಯಾನೊ ಕೌಮೆ ಹೇಳಿದ್ದಾರೆ.
500 ಕಿರು ಜಲಾಶಯ : ಕಳೆದೊಂದು ದಶಕದಿಂದ ಗ್ರಾಮೀಣ ಭಾಗಕ್ಕೆ ಶುದ್ಧ ಕುಡಿಯುವ ನೀರು ಕಲ್ಪಿಸುವ ಯೋಜನೆ ಕಾರ್ಯಾಚರಣೆಯಲ್ಲಿದೆ. ಆದರೆ ಸೂಕ್ತ ಸೌಲಭ್ಯಗಳಿಲ್ಲದೇ ಉದ್ದೇಶಿತ ಯೋಜನೆಗೆ ಹಿನ್ನಡೆಯಾಗಿದೆ. ಸಣ್ಣ ಪುಟ್ಟ ಲೋಪದೋಷ ಸರಿಪಡಿಸಿಕೊಂಡು ಪೂರ್ಣ ಪ್ರಮಾಣದಲ್ಲಿ ಯೋಜನೆ ಕಾರ್ಯಗತಗೊಳಿಸುವಂತೆ ರಾಜ್ಯ ಸರಕಾರಕ್ಕೆ ವಿಶ್ವ ಬ್ಯಾಂಕ್‌ ಸೂಚಿಸಿದೆ.
ಯೋಜನೆಯಡಿ ನೀರಿನ ಅಭಾವ ಎದುರಿಸುತ್ತಿರುವ ಏಳು ಜಿಲ್ಲೆಗಳಲ್ಲಿ 500 ಕಿರು ಜಲಾಶಯಗಳ ನಿರ್ಮಾಣ, ಪುನರುಜ್ಜೀವನಗೊಳಿಸಿ ಅಂತರ್ಜಲ ವೃದ್ಧಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲು ವಿಶ್ವ ಬ್ಯಾಂಕ್‌ ನಿರ್ದೇಶನ ನೀಡಿದೆ. 500 ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಯೂ ಮನೆಗಳಿಗೆ ನೀರು ಪೂರೈಸುವ ಉದ್ದೇಶವನ್ನೂ ಈ ಯೋಜನೆ ಹೊಂದಿದೆ.

lokesh

Recent Posts

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

28 mins ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

1 hour ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

3 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

3 hours ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

6 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

6 hours ago