ಬೆಂಗಳೂರು- ಸತತ ಹೋರಾಟದ ಫಲವಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನ ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ.
ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್ ನಲ್ಲಿನ ಪಿಐಎಲ್ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದರು.
ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್ ಪಾಟೀಲ್ ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನ ಸಲ್ಲಿಸಿದ್ದೇವೆ. 1871ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನ ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂದರ್ಭ ಬಂದೊದಗಿದೆ ಎಂದು ಹೇಳಿದರು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…