BREAKING NEWS

ಪಂಚಮಸಾಲಿ ಮೀಸಲಾತಿ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ – ಶ್ರೀ ವಚನಾನಂದ ಮಹಾಸ್ವಾಮೀಜಿ

ಬೆಂಗಳೂರು- ಸತತ ಹೋರಾಟದ ಫಲವಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನ ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ.
ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ ನಲ್ಲಿನ ಪಿಐಎಲ್ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದರು.
ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್ ಪಾಟೀಲ್ ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನ ಸಲ್ಲಿಸಿದ್ದೇವೆ. 1871ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನ ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂದರ್ಭ ಬಂದೊದಗಿದೆ ಎಂದು ಹೇಳಿದರು.

lokesh

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

9 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

12 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

16 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

16 hours ago