ಇನ್ನೂ ಮೂರು ಸಚಿವರು ಕೋರ್ಟ್‌ ಮೆಟ್ಟಿಲೇರಲಿದ್ದಾರೆ: ಎಸ್‌.ಟಿ. ಸೋಮಶೇಖರ್‌

ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಇನ್ನೂ ಮೂವರು ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಹಕಾರಿ ಸಚಿವ ಎಸ್‌.ಟಿ ಸೋಮಶೇಖರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ. ಗೋಪಾಲಯ್ಯ, ಎಂ.ಟಿ.ಬಿ. ನಾಗರಾಜ್‌ ಹಾಗೂ ಶರ್‌. ಶಂಕರ್‌ ಅವರೂ ಕೂಡ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ನಿರ್ದೇಶಿಸಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಇಷ್ಟು ವರ್ಷ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ ಒಂದೇ ಕ್ಷಣಕ್ಕೆ ಟಿವಿಯಲ್ಲಿ ಸುದ್ದಿ ಪ್ರಸಾರವಾಗಿ ತೇಜೋವಧೆ ಆಗಬಾರದು ಎಂಬ ಕಾರಣಕ್ಕೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾಗಿ ಅವರು ತಿಳಿಸಿದ್ದಾರೆ.

× Chat with us