ಹುಟ್ಟುಹಬ್ಬ ಆಚರಿಸಿಕೊಳ್ಳುವ ವೇಳೆ ವಿದ್ಯುತ್ ಸ್ಪರ್ಶ: 3 ವರ್ಷದ ಬಾಲಕಿ ಸಾವು

ಚಾಮರಾಜನಗರ: ಹುಟ್ಟು ಹಬ್ಬ ಆಚರಿಸಿಕೊಳ್ಳುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಬಾಲಕಿಯೊಬ್ಬಳು ಸ್ಥಳದಲ್ಲಿ ಮೃತಪಟ್ಟ ಧಾರುಣ ಘಟನೆ ಚಾಮರಾಜನಗರ ತಾಲ್ಲೂಕಿನ ಕೆಂಗಾಕಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.

ಗ್ರಾಮದ ಸಿದ್ದಲಿಂಗಸ್ವಾಮಿ ಅವರ ಪುತ್ರಿ ನಿವೇದಿತಾ(3) ಮೃತಪಟ್ಟ ಬಾಲಕಿ.

ಹುಟ್ಟು ಹಬ್ಬದ ಸಂಭ್ರಮಾಚರಣೆ ವೇಳೆ ಕೇಕ್ ಕತ್ತರಿಸುತ್ತಿದ್ದಾಗ ಟೇಬಲ್ ಗೆ ಸಂಪರ್ಕ ಕಲ್ಪಿಸಿದ್ದ ವೈರ್ ನಿಂದ ವಿದ್ಯುತ್ ತಗುಲಿ ಬಾಲಕಿ ಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾಳೆ.

ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

× Chat with us