BREAKING NEWS

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 328 ಹೊಸ ಕೊವಿಡ್ ಪ್ರಕರಣ ಪತ್ತೆ, 409 ಮಂದಿ ಡಿಸ್‌ಚಾರ್ಜ್‌

ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 328 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 409 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1159 ಇದೆ. ಕೊನೆಯ 24 ಗಂಟೆಗಳಲ್ಲಿ 7205 ಟೆಸ್ಟ್‌ಗಳು ನಡೆದಿವೆ, 6418 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 787 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 4.55% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಒಟ್ಟು 1159 ಸಕ್ರಿಯ ಪ್ರಕರಣಗಳ ಪೈಕಿ 1087 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 72 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 51 ಸೋಂಕಿತರು ಜನರಲ್‌ ಬೆಡ್‌ನಲ್ಲಿದ್ದು, 9 ಸೋಂಕಿತರು ಆಮ್ಲಜನಕ ಸಪೋರ್ಟ್‌ ಐಸೋಲೇಷನ್‌ ಬೆಡ್‌ನಲ್ಲಿದ್ದಾರೆ, 9 ಮಂದಿ ಐಸಿಯುನಲ್ಲಿದ್ದಾರೆ ಹಾಗೂ 3 ಸೋಂಕಿತರು ವೆಂಟಿಲೇಟರ್‌ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 26, ಮಂಡ್ಯದಲ್ಲಿ 7, ಹಾಗೂ ಚಾಮರಾಜನಗರದಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 76, ಮಂಡ್ಯದಲ್ಲಿ 26, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 17 ಸಕ್ರಿಯ ಪ್ರಕರಣಗಳಿವೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago