BREAKING NEWS

ಬೆಂ-ಮೈ ಹೆದ್ದಾರಿಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತಗಳು, 121 ಸಾವುಗಳು: ನಿತಿನ್ ಗಡ್ಕರಿ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅಂಕಿಅಂಶಗಳನ್ನು ಸಲ್ಲಿಸಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಇಂಡಿಯನ್ ರೋಡ್ ಕಾಂಗ್ರೆಸ್ (ಐಆರ್‌ಸಿ) ಮಾರ್ಗಸೂಚಿಗಳ ಪ್ರಕಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ವೇಗ ಮಿತಿ ಸೂಚನಾ ಫಲಕಗಳನ್ನು ಅಳವಡಿಸಿದೆ ಎಂದು ಹೇಳಿದರು.

ಅಲ್ಲದೆ ನಾಲ್ಕು ಮಾರ್ಗದ ಗಸ್ತು ವಾಹನಗಳನ್ನು ನಿಯೋಜಿಸುವುದರ ಜೊತೆಗೆ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಹೆಚ್ಚುವರಿ ಮಾಹಿತಿ ಫಲಕಗಳನ್ನು ಸಹ ಒದಗಿಸಿದೆ. ಕ್ಯಾಮೆರಾ ಕಣ್ಗಾವಲು, ಓವರ್‌ಹೆಡ್ ಮಾಹಿತಿ ವೇರಿಯಬಲ್ ಮೆಸೇಜ್ ಸಿಗ್ನಲ್‌ಗಳು (ವಿಎಂಎಸ್) ಸೇರಿದಂತೆ ಇತರ ಸುರಕ್ಷತಾ ಕ್ರಮಗಳು ಮತ್ತು ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು ಮತ್ತು ಎಲ್ಲಾ ಮೋಟಾರು ರಹಿತ ವಾಹನಗಳನ್ನು ನಿಷೇಧಿಸುವ ಕ್ರಮ ಕೈಗೊಂಡಿದೆ. ಪೊಲೀಸರು ಇಂಟರ್‌ಸೆಪ್ಟರ್‌ಗಳೊಂದಿಗೆ ವೇಗದ ಮಿತಿಗಳನ್ನು ಜಾರಿಗೊಳಿಸುತ್ತಾರೆ ಎಂದು ಅವರು ವಿವರಿಸಿದರು.

ಪ್ರಥಮ ಚಿಕಿತ್ಸಾ ಸೌಲಭ್ಯಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಮೂಲಭೂತ ಜೀವಾಧಾರಕ ವ್ಯವಸ್ಥೆಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಯೊಂದಿಗೆ ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಎಕ್ಸ್‌ಪ್ರೆಸ್‌ವೇನಲ್ಲಿ ತುರ್ತು ಪರಿಸ್ಥಿತಿಗಳ ಸಂದರ್ಭಗಳಿಗೆ ನಿಯೋಜಿಸಲಾಗಿದೆ. ಟೋಲ್ ಪ್ಲಾಜಾದಲ್ಲಿ ಪ್ರಥಮ ಚಿಕಿತ್ಸೆಯೊಂದಿಗೆ ವೈದ್ಯಕೀಯ ಚಿಕಿತ್ಸಾ ಪೋಸ್ಟ್ ಅನ್ನು ಸಹ ಒದಗಿಸಲಾಗಿದೆ ಎಂದರು.

ಹೆದ್ದಾರಿಯಲ್ಲಿ ಟೋಲ್ ಶುಲ್ಕದ ಬಗ್ಗೆ ದೊಡ್ಡ ಪ್ರಮಾಣದ ಸಾರ್ವಜನಿಕ ಅಸಮಾಧಾನವಿದೆಯೇ ಎಂದು ಕೇಳಲಾದ ಪ್ರಶ್ನೆಗೆ, ತಿದ್ದುಪಡಿಗಳೊಂದಿಗೆ ಎನ್‌ಎಚ್ ಶುಲ್ಕ ನಿಯಮಗಳು 2008 ರ ಪ್ರಕಾರ ಬಳಕೆದಾರರ ಶುಲ್ಕವನ್ನು ವಿಧಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

andolanait

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

3 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

3 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

4 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

4 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

4 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

4 hours ago