ಮಂಡ್ಯ : ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ನ್ನು ಬಾಕಿ ಉಳಿಸಿಕೊಂಡಿದೆ. 2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್ ಬಿಲ್ ಕಟ್ಟಿಲ್ಲವಂತೆ. ಈ ಮೂಲಕ ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್ ಬಿಲ್ನ್ನು ಬಾಕಿ ಉಳಿಸಿಕೊಂಡಿದೆ. ಇನ್ನು ರೋಗಗ್ರಸ್ಥ ಕಾರ್ಖಾನೆ ಎಂದೆ ಬಿಂಬಿಸಿಕೊಂಡಿರುವ ಮೈಶುಗರ್ ಫ್ಯಾಕ್ಟರಿಗೆಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಪುನಾರಂಭಕ್ಕೆ 50 ಕೋಟಿ ರೂ. ಹಣವನ್ನ ಬಿಡುಗಡೆ ಮಾಡಿತ್ತು.
ವಿದ್ಯುತ್ ಪೂರೈಸುವಂತೆ ಇಂಧನ ಸಚಿವರಿಗೆ MLC ಗೂಳಿಗೌಡ ಪತ್ರ : ಇನ್ನು ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಟನ್ ಕಬ್ಬನ್ನು ನುರಿಯುವ ಗುರಿ ಹೊಂದಿರುವ ಈ ಕಾರ್ಖಾನೆಗೆ ವಿದ್ಯುತ್ ಸರಬರಾಜು ಆಗಬೇಕಿದೆ. ಈ ಹಿನ್ನಲೆ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ರೈತರ ಕಬ್ಬು ಅರೆಯಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಮೈಶುಗರ್ ಹಲವು ವರ್ಷದಿಂದ ನಷ್ಟಕ್ಕೆ ಸಿಲುಕಿ 40.86 ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ಅವಶ್ಯವಿರುವ ವಿದ್ಯುತ್ ಸರಬರಾಜು ಮಾಡಿ, ಬಳಿಕ ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತೆ ಎಂದು ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಪೂರೈಸಲು ಆದೇಶಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ಗೆ ಮನವಿ ಸಲ್ಲಿಸಿದ್ದಾರೆ.
ಮೈಶುಗರ್ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ್ದ ಸಚಿವ ಶಿವಾನಂದ ಎಸ್ ಪಾಟೀಲ್ : ಇನ್ನು ಇತ್ತೀಚೆಗಷ್ಟೇ ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್ ಪಾಟೀಲ್ ಚಾಲನೆ ನೀಡಿದ್ದರು. ಅವರಿಗೆ ಸಚಿವ ಚಲುವರಾಯಸ್ವಾಮಿ ಹಾಗೂ ಸ್ಥಳೀಯ ಶಾಸಕರು ಸಾಥ್ ನೀಡಿದ್ದರು. ಈ ವೇಳೆ ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ ‘ಮಂಡ್ಯಕ್ಕೆ ಕಾಂಗ್ರೆಸ್ ಸರ್ಕಾರದ ಮೊದಲ ಅನುದಾನ ನೀಡಲಾಗಿದ್ದು,. ಮೈಶುಗರ್ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲೆಯ ರೈತರ ಪರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…