Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ನರೇಗಾ ಯೋಜನೆಯಡಿ ಕಾರ್ಮಿಕರ ಮಕ್ಕಳಿಗಾಗಿ 4,000 ‘ಕೂಸಿನ ಮನೆ’: ರಾಜ್ಯ ಸರ್ಕಾರ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂ–ನರೇಗಾ) ಅಡಿಯಲ್ಲಿ ಕಾರ್ಮಿಕರ ಮಕ್ಕಳ ಲಾಲನೆ-ಪೋಷಣೆಗಾಗಿ 4,000 ಕೂಸಿನ ಮನೆಗಳ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯು 4,000 ಶಿಶುವಿಹಾರಗಳ ತೆರೆಯಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ನರೇಗಾ ಯೋಜನೆಯ ನಿಯಮಗಳ ಪ್ರಕಾರ, ಯೋಜನೆಯಲ್ಲಿ ಮಹಿಳಾ ಕಾರ್ಮಿಕರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಿಳಿಸಲಾಗಿದೆ. ಇದರಂತೆ ಕನಿಷ್ಠ ಮೂರನೇ ಒಂದು ಭಾಗದಷ್ಟು ಫಲಾನುಭವಿಗಳು ಮಹಿಳೆಯರೇ ಆಗಿದ್ದು, ಬಹುತೇಕ ಹೆಣ್ಣುಮಕ್ಕಳು ಯುವತಿಯರು, ಮಗುವಿನ ತಾಯಿಯಂದಿರೇ ಆಗಿದ್ದಾರೆ.

ಶೇ.50ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿರುವುದರಿಂದ ಕೆಲಸದೊಂದಿಗೆ ಮಕ್ಕಳ ಪೋಷಣೆ ಮಾಡಬೇಕಾಗುತ್ತದೆ. ಹೀಗಾಗಿಯೇ ಮಕ್ಕಳ ಪಾಲನೆ ಹಾಗೂ ಪೋಷಣೆಗೆ ಸರ್ಕಾರ ಶಿಶುವಿಹಾರಗಳ ತೆರೆಯಲು ನಿರ್ಧರಿಸಿದೆ.

ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಇದುವರೆಗೆ ನರೇಗಾ ಯೋಜನೆಯಡಿ ಕೆಲಸ ಮಾಡುವ ಮಹಿಳೆಯರ ಮಕ್ಕಳಿಗೆ ಕುಡಿಯುವ ನೀರು ಮತ್ತು ಆಶ್ರಯದಂತಹ ಸೌಕರ್ಯಗಳನ್ನು ಒದಗಿಸಲಾಗಿದೆ. ಇನ್ನು ಮುಂದೆ ಅಂತಹ ಸ್ಥಳಗಳಲ್ಲಿ ಶಿಶುವಿಹಾರಗಳ ತೆರೆಯಲಾಗುವುದು ಎಂದು ಹೇಳಿದರು.

ಕಾರ್ಮಿಕರ ಮಹಿಳೆಯರು ಕೆಲಸ ಮಾಡುವ ವೇಳೆ ಮಹಿಳೆಯೊಬ್ಬರು ಅವರ ಮಕ್ಕಳನ್ನು ನೋಡಿಕೊಳ್ಳುತ್ತಾರೆ. ಮಕ್ಕಳನ್ನು ನೋಡಿಕೊಳ್ಳುವ ಮಹಿಳೆಗೂ ವೇತನವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಶಿಶುವಿಹಾರಗಳಲ್ಲಿ ಮಕ್ಕಳಿಗೆ ಆರೋಗ್ಯಕರ ಆಹಾರವನ್ನು ನೀಡಲಾಗುವುದು. ಮಕ್ಕಳು ಆರು ವರ್ಷದವರಾದ ಬಳಿಕ ಅವರನ್ನು ಶಾಲೆಗೆ ಸೇರಿಸಲು ಶಿಶುವಿಹಾರಗಳು ಸಹಾಯ ಮಾಡುತ್ತವೆ ಎಂದು ಹೇಳಿದರು.

ಕರ್ನಾಟಕದಲ್ಲಿ 6,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!