ಚಿಕ್ಕಮಗಳೂರು : ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.
ಚೆಕ್ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ. 2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.
ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸಿಎಂಎಂ 12, 15,18, 19, 23, 26, 36ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಬೆಂಗಳೂರಿನ ಎಸಿಎಂಎಂ 22 ನೇ ನ್ಯಾಯಾಲಯದಲ್ಲಿ ಮೂರು, 42ನೇ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸ್‌ಸಿಸಿಎಚ್ 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ ಜೆಂಎಫ್‌ಸಿ ನ್ಯಾಯಾಲಯದಲ್ಲಿ 5 ಮತ್ತು 4ನೇ ಜೆಎಂಎಫ್‌ಸಿಯಲ್ಲಿ 3 ಪ್ರಕರಣ, ಅಥಣಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಎರಡು, ಹಾಸನ ನ್ಯಾಯಾಲಯದಲ್ಲಿ ಎರಡು, ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು. ಅನಂತಪುರ ನ್ಯಾಯಾಲಯದಲ್ಲಿ ಒಂದು, ಗುಂತಕಲ್ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.
ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ. 2022–23ನೇ ಸಾಲಿನಲ್ಲಿ ಅವರ ವಾರ್ಷಿಕ ಆದಾಯ ₹8.15 ಲಕ್ಷ ಇತ್ತು. ₹17.89 ಲಕ್ಷ ಮೌಲ್ಯದ ಚರಾಸ್ತಿ, ₹2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹93.19 ಲಕ್ಷ ಸಾಲ ಇದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…