ಪಾಕಿಸ್ತಾನ: ಭೂಕಂಪಕ್ಕೆ 42 ಮಂದಿ ಬಲಿ

ಇಸ್ಲಾಮಾಬಾದ್: ದಕ್ಷಿಣ ಪಾಕಿಸ್ತಾನದಲ್ಲಿ ಭಾರೀ ಭೂಕಂಪ ಸಂಭವಿಸಿದ್ದು 42 ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅನೇಕರ ಸ್ಥಿತಿ ಶೋಚನೀಯವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಗುರುವಾರ ಮುಂಜಾನೆ 3.20ಕ್ಕೆ ಈ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.7ರಷ್ಟು ತೀವ್ರತೆ ದಾಖಲಾಗಿದೆ.

ಪಾಕಿಸ್ತಾನದ ಕ್ವೆಟ್ಟಾ ಜಿಲ್ಲೆಯ ಹರ್ನಾಯ್ ಪ್ರದೇಶದಲ್ಲಿ ಮುಂಜಾನೆ ಭೂಕಂಪ ಉಂಟಾಗಿದೆ.

ಮನೆಯ ಚಾವಣಿ, ಗೋಡೆ ಕುಸಿದು ಬಿದ್ದ ಕಾರಣದಿಂದ 40ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಅಕ್ಕಪಕ್ಕದ ಜಿಲ್ಲೆಗಳಲ್ಲೂ ಭೂಕಂಪದಿಂದ ಹಾನಿಯಾಗಿದೆ.

ಭೂಕಂಪದ ತೀವ್ರತೆಯನ್ನು ಗಮನಿಸಿದರೆ ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗಾಯಗೊಂಡವರನ್ನು ಬಲೂಚಿಸ್ತಾನದ ಆಸ್ಪತ್ರೆಗೆ ದಾಖಲಿಸಲಾಗಿದೆ.

× Chat with us