ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮರಾಠ ಅಭಿವೃದ್ಧಿ ನಿಗಮ ರಚನೆಯಾದ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಈ ವೇಳೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದರು. ಅದರಂತೆ ನಿಗಮ ರಚಿಸಿ ಸರ್ಕಾರ ಆದೇಶ ಹೊರಡಿಸಿತ್ತು.

× Chat with us