ನವದೆಹಲಿ : ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ.
ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ ಕುಸಿತದಲ್ಲಿ ಈವರೆಗೂ 14 ಶವಗಳನ್ನು ಹೊರತೆಗೆಯಲಾಗಿದೆ. ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಸೋಲನ್ ಜಿಲ್ಲೆಯಲ್ಲಿ ಒಂದು ಕುಟುಂಬದ ಏಳು ಸದಸ್ಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಕುಲು, ಕಿನ್ನೌರ್, ಲಾಹೌಲ್ ಮತ್ತು ಸ್ಪಿತಿ ಹೊರತುಪಡಿಸಿ ರಾಜ್ಯದ 12 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.
ಯುನೆಸ್ಕೋ ವಿಶ್ವ ಪರಂಪರೆಯ ಶಿಮ್ಲಾ-ಕಲ್ಕಾ ರೈಲು ಮಾರ್ಗವು ಶಿಮ್ಲಾದ ಸಮ್ಮರ್ ಹಿಲ್ ಬಳಿ 50 ಮೀಟರ್ ಸೇತುವೆ, ಭೂಕುಸಿತದಿಂದ ಹಾನಿಗೊಳಗಾಗಿದೆ. ಟ್ರ್ಯಾಕ್‍ನ ಒಂದು ಭಾಗ ನೇತಾಡುತ್ತಿದೆ. ಈ ಭಾಗದಲ್ಲಿ ಸೇನೆ, ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್, ಐಟಿಬಿಪಿ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…