ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷ ತುಂಬಿರಲೇಬೇಕು, ಇಲ್ಲವಾದರೆ ಮಗುವಿಗೆ ಪ್ರವೇಶವಿಲ್ಲ.
ಈ ಕುರಿತಂತೆ ಕರ್ನಾಟಕ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದಾಗಿ ಪೋಷಕರು ಇನ್ನು ಮುಂದೆ ಮಕ್ಕಳನ್ನು ಶಾಲೆಗೆ ಸೇರಿಸಬೇಕಾದರೆ ಈ ನಿಯಮವನ್ನು ಪಾಲನೆ ಮಾಡಲೇಬೇಕಾಗುತ್ತದೆ.
2022ರ ಜುಲೈ 26ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕೆಂದು 4 ವರ್ಷದ ಪುತ್ರಿಯ ತಂದೆ ಬೆಂಗಳೂರಿನ ಅನಿಕೇತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.
ಅಲ್ಲದೆ, ಮಾರ್ಗಸೂಚಿಯ ಹಿಂದೆ ಮೇಲ್ನೋಟಕ್ಕೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ ಎಂದು ನ್ಯಾಯಾಲಯಕ್ಕೆ ಅರ್ಥವಾಗಿದೆ. ಹೀಗಾಗಿ, ಒಬ್ಬ ವಿದ್ಯಾರ್ಥಿ/ ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
ಎನ್ ಇಪಿ ಅಳವಡಿಕೆ: ಜಾಗತಿಕ ಶೈಕ್ಷಣಿಕ ಮಾರ್ಗಸೂಚಿಗಳನ್ನು ಆಧರಿಸಿ ಪ್ರವೇಶಾತಿ ವಯಸ್ಸನ್ನು ಎನ್ಇಪಿ ಮಾನದಂಡಗಳಲ್ಲಿ ಸೇರಿಸಲಾಗಿದೆ. ಮಕ್ಕಳಿಗೆ ಸರಿಯಾದ ಆರೈಕೆ ಮತ್ತು ಶಿಕ್ಷಣ ನೀಡಬೇಕು. ಆಟ ಕೇಂದ್ರಿತ, ಚಟುವಟಿಕೆ ಕೇಂದ್ರಿತ, ಹೊಂದಿಕೊಳ್ಳುವ ಕಲಿಕೆಯ ಭರವಸೆಯ ಹಿನ್ನೆಲೆಯಲ್ಲಿ ತಜ್ಞರು ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದಾರೆ. ಸಕ್ಷಮ ಪ್ರಾಧಿಕಾರ ರೂಪಿಸಿರುವ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.
ರಾಷ್ಟ್ರೋತ್ಥಾನ ವಿದ್ಯಾಕೇಂದ್ರವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ಅಳವಡಿಸಿಕೊಂಡಿದ್ದು, 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ ಮತ್ತು ಗರಿಷ್ಠ ಅರ್ಹತಾ ಮಾನದಂಡವನ್ನು ಸರಿಯಾಗಿ ಮಾರ್ಪಾಡು ಮಾಡಿದೆ. ವಿದ್ಯಾಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಪ್ರವೇಶಾತಿ ಮಾರ್ಗಸೂಚಿಗಳು ಸಿಂಧುವಾಗಿದ್ದು, ಎನ್ಇಪಿಗೆ ಅನುಗುಣವಾಗಿವೆ ಎಂದು ಕೋರ್ಟ್ ಆದೇಶಿಸಿದೆ.
ರಾಷ್ಟ್ರೋತ್ಥಾನ ವಿದ್ಯಾಕೇಂದ್ರವನ್ನು ಶಿಕ್ಷಣ ಇಲಾಖೆಯ ಮೂಲಕ ಕೇಂದ್ರ ಸರ್ಕಾರ ನಡೆಸುತ್ತಿದೆ. ಹೀಗಾಗಿ, ವಿದ್ಯಾಕೇಂದ್ರವು ಎನ್ಇಪಿ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
ಅರ್ಜಿದಾರರ ಪರ ವಕೀಲರು, 2020ರ ಮೇ 11ರ ಅಧಿಸೂಚನೆಯ ಪ್ರಕಾರ ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ 5.5 ವರ್ಷ ಆಗಿರಬೇಕು. ಎಲ್‌ಕೆಜಿಗೆ ಮಗು ಸೇರಿಸಲು 3.5 ವರ್ಷ ಆಗಿರಬೇಕು ಎಂದು ಹೇಳಲಾಗಿದೆ. ಇದರಿಂದ ತೊಂದರೆ ಆಗಲಿದೆ ಎಂದು ವಾದಿಸಿದ್ದರು.
ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಅವರು “ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ 2009ರ ನಿಬಂಧನೆಗಳು ಮತ್ತು ಎನ್ಇಪಿಯನ್ನು ಗಮನದಲ್ಲಿಟ್ಟುಕೊಂಡು ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯಸ್ಸು ಮಿತಿ ನಿಗದಿಪಡಿಸಲಾಗಿದೆ” ಎಂದು ಸಮರ್ಥಿಸಿದ್ದರು.
ಏನಿದು ಪ್ರಕರಣ?; ಬೆಂಗಳೂರಿನ ಥಣಿಸಂದ್ರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ತ್ರಿಷಿಕಾಳನ್ನು ಪ್ರಸಕ್ತ ವರ್ಷ ಎಲ್‌ಕೆಜಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ಆಕೆಯ ಪೋಷಕರು ಕೋರಿದ್ದರು. ಇದನ್ನು ಮನ್ನಿಸಿ, ಈ ಸಂಬಂಧ ಶಾಲೆಯು ಶುಲ್ಕವನ್ನೂ ವಸೂಲಿ ಮಾಡಿತ್ತು.
2023ರ ಜೂನ್ 1ಕ್ಕೆ ಸರಿಯಾಗಿ ನಾಲ್ಕು ವರ್ಷ ಪೂರ್ಣಗೊಳಿಸದಿರುವುದರಿಂದ ಆಕೆ ಎಲ್‌ಕೆಜಿ ಪ್ರವೇಶಕ್ಕೆ ಅರ್ಹಳಲ್ಲ ಎಂದು ಶಾಲೆಯು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರ 2018ರ ಮೇ 23ರ ಆದೇಶ ಉಲ್ಲೇಖಿಸಿ (ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿರುವ ಆದೇಶ) 2023ರ ಮೇ 27ರಂದು ಪೋಷಕರಿಗೆ ಶಾಲೆಯು ಈಮೇಲ್ ಕಳುಹಿಸಿತ್ತು.
ಹಾಗಾಗಿ ಪೋಷಕರು ರಾಜ್ಯ ಸರ್ಕಾರವು ಒಂದನೇ ತರಗತಿ ಪ್ರವೇಶಕ್ಕೆ 2025-26ನೇ ಸಾಲಿನಲ್ಲಿ ಆರು ವರ್ಷ ತುಂಬಿರಬೇಕು ಎಂದು ಆದೇಶಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…