BREAKING NEWS

ಕರ್ನಾಟಕ ರಾಜ್ಯೋತ್ಸವಕ್ಕೆ 68 ಸಾಧಕರಿಗೆ ಪ್ರಶಸ್ತಿ ಪ್ರದಾನ

ಬೆಂಗಳೂರು : ಈ ಬಾರಿಯ 68 ನೇ ಕನ್ನಡ ರಾಜ್ಯೋತ್ಸವಕ್ಕೆ 68 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದ್ದು ನವೆಂಬರ್‌ ಒಂದರಂದು ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

68 ಸಾಧಕರು, 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಎರಡು ದಿನಗಳಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಅಂದಹಾಗೆ ಈ ಬಾರಿಯ ಎಲ್ಲ ಜಾತಿ, ಧರ್ಮ ಮತ್ತು ಲಿಂಗಗಳಿಗೆ ಪ್ರಾತಿನಿಧ್ಯ ಸಿಗಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.

ಕನ್ನಡ ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಮಾತನಾಡಿ, ಇದೇ ಮೊದಲ ಬಾರಿಗೆ ಕನ್ನಡಕ್ಕಾಗಿ ದುಡಿದ ಹತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ನಮಗೆ ಈಗಾಗಲೇ 3523 ಅರ್ಜಿಗಳು ಬಂದಿದ್ದು, 26,655 ಶಿಫಾರಸುಗಳು ಬಂದಿವೆ.

28 ಸಮಿತಿಯ ಸದಸ್ಯರು ಗಣ್ಯರ ಹೆಸರನ್ನು ಆಯ್ಕೆ ಮಾಡುತ್ತಾರೆ. ಸಮಿತಿ ನೀಡಿರುವ ಹೆಸರುಗಳನ್ನು ಅನುಮೋದಿಸುತ್ತೇವೆ ಎಂದರು. ರಾಜ್ಯೋತ್ಸವ ಪ್ರಶಸ್ತಿಗಾಗಿ ಭೌತಿಕವಾಗಿ 2,500, ಸೇವಾ ಸಿಂಧು ಪೋರ್ಟಲ್ ಮೂಲಕ 4,500ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಸುಮಾರು 23 ಸಾವಿರಕ್ಕೂ ಅಧಿಕ ಜನ 2000 ಮಂದಿ ಸಾಧಕರನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನಾಮನಿರ್ದೇಶನ ಮಾಡಿದ್ದಾರೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

16 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

20 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago