BREAKING NEWS

69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಅತ್ಯುತ್ತಮ ಕನ್ನಡ ಚಿತ್ರವಾಗಿ ‘ಚಾರ್ಲಿ 777’

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಇವತ್ತು (ಆಗಸ್ಟ್ 24) ಸಂಜೆ 5.30ಕ್ಕೆ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಯಿತು. ಈ ಬಾರಿಯೂ ಅತ್ಯುತ್ತಮ ನಟ ಪ್ರಶಸ್ತಿ ದಕ್ಷಿಣ ಭಾರತಕ್ಕೆ ಲಭಿಸಿದೆ. ‘ಪುಷ್ಪ: ದಿ ರೈಸ್’ ಚಿತ್ರದ ನಟನೆಗಾಗಿ ತೆಲುಗಿನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದಿದ್ದಾರೆ. ‘ಅತ್ಯುತ್ತಮ ನಟಿ’ ಪ್ರಶಸ್ತಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಕೃತಿ ಸನೊನ್ ಪಾಲಾಗಿದೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಕರ್ನಾಟಕಕ್ಕೆ ಒಟ್ಟು 4 ಪ್ರಶಸ್ತಿಗಳು ಲಭಿಸಿವೆ. ಆ ಕುರಿತ ಸಂಪೂರ್ಣ ವಿವರ ಇಲ್ಲಿದೆ

*ಕ್ರಿಟಿಕ್ (ಸ್ಪೆಷಲ್ ಮೆನ್ಷನ್)
ಸುಬ್ರಹ್ಮಣ್ಯ ಬಡೂರು

*ನಾನ್ ಫೀಚರ್‌ (ಸ್ಪೆಷಲ್ ಮೆನ್ಷನ್)
ಚಿತ್ರ – ಬಾಳೇ ಬಂಗಾರ : ಅನಿರುದ್ಧ ಜತ್ಕರ್‌

*ನಾನ್ ಫೀಚರ್ ಫಿಲ್ಸ್ (ಬೆಸ್ಟ್ ಎಕ್ಸ್‌ಪ್ಲೋರೇಷನ್/ಅಡ್ವೆಂಚರ್‌ ಫಿಲ್ಮ್)
ಚಿತ್ರ – ಆಯುಷ್ಮಾನ್ (ಇಂಗ್ಲೀಷ್, ಕನ್ನಡ)
ನಿರ್ಮಾಣ – ಮ್ಯಾಥ್ಯೂ ವರ್ಗೀಸ್, ದಿನೇಶ್ ರಾಜ್‌ಕುಮಾರ್ ಎನ್‌, ನವೀನ್ ಫ್ರಾನ್ಸಿಸ್
ನಿರ್ದೇಶನ – ಜೇಕಬ್ ವರ್ಗೀಸ್

*ಫೀಚರ್ ಫಿಲ್ಮ್ಸ್
ಅತ್ಯುತ್ತಮ ಕನ್ನಡ ಸಿನಿಮಾ – 777 ಚಾರ್ಲಿ
ನಿರ್ಮಾಣ – ಪರಂವಃ ಸ್ಟುಡಿಯೋಸ್

ಭಾರತಿ ವಿಷ್ಣುವರ್ಧನ್ ಕುರಿತಾದ ಸಾಕ್ಷ್ಯಚಿತ್ರ ‘ಬಾಳೇ ಬಂಗಾರ’

ತಮ್ಮ ಅತ್ತೆ ಪದ್ಮಶ್ರೀ ಪುರಸ್ಕೃತೆ ಭಾರತಿ ವಿಷ್ಣುವರ್ಧನ್ ಕುರಿತಾಗಿ ಅನಿರುದ್ಧ್ ಜತ್ಕರ್‌ ತಯಾರಿಸಿದ ಸಾಕ್ಷ್ಯಚಿತ್ರವೇ ‘ಬಾಳೇ ಬಂಗಾರ’. ಈಗಾಗಲೇ ‘ಬಾಳೇ ಬಂಗಾರ’ ಸಾಕ್ಷ್ಯಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಕಲಾಂ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದೆ. ಮೇರು ನಟಿಯೊಬ್ಬರ ಕುರಿತಾದ ಅತ್ಯಂತ ದೀರ್ಘ ಕಾಲಾವಧಿಯ (141 ನಿಮಿಷಗಳು) ಸಾಕ್ಷ್ಯಚಿತ್ರ ಇದಾಗಿದೆ. ಈ ಸಾಕ್ಷ್ಯಚಿತ್ರದ ಪರಿಕಲ್ಪನೆ, ಸಂಶೋಧನೆ, ಲೇಖನ, ನಿರೂಪಣೆ ಹಾಗೂ ನಿರ್ದೇಶನವನ್ನ ಮಾಡಿದವರು ಅನಿರುದ್ಧ್ ಜತ್ಕರ್.

777 ಚಾರ್ಲಿ

ಶ್ವಾನ ಹಾಗೂ ಮನುಷ್ಯನ ನಡುವಿನ ಅನ್ಯೋನ್ಯ ಬಂಧವನ್ನ ಸಾರುವ ಮನಮಿಡಿಯುವ ಸಿನಿಮಾ ‘777 ಚಾರ್ಲಿ’. ಕಿರಣ್ ರಾಜ್ ಕೆ ನಿರ್ದೇಶನದ ‘777 ಚಾರ್ಲಿ’ ಸಿನಿಮಾದಲ್ಲಿ ಧರ್ಮ ಆಗಿ ರಕ್ಷಿತ್ ಶೆಟ್ಟಿ ಅಭಿನಯಿಸಿದ್ದರೆ, ಚಾರ್ಲಿ ಆಗಿ ಲ್ಯಾಬ್ರಡಾರ್‌ ತಳಿಯ ಶ್ವಾನ ಕಾಣಿಸಿಕೊಂಡಿತ್ತು. ತಾರಾಬಳಗದಲ್ಲಿ ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ಭಾರ್ಗವಿ ನಾರಾಯಣ್ ಮುಂತಾದವರಿದ್ದರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದ ‘777 ಚಾರ್ಲಿ’ ಸಿನಿಮಾಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಫ್ಯಾಮಿಲಿ ಆಡಿಯೆನ್ಸ್ ಹಾಗೂ ಮಕ್ಕಳಿಂದ ‘777 ಚಾರ್ಲಿ’ ಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ಲಭಿಸಿತು. 20 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗಿದ್ದ ‘777 ಚಾರ್ಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 105 ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿಯಾಯಿತು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago