BREAKING NEWS

ಮಳೆ ಅವಾಂತರಕ್ಕೆ ಹಿಮಾಚಲಪ್ರದೇಶದಲ್ಲಿ 71 ಬಲಿ

ಶಿಮ್ಲಾ : ಕಳೆದ 3 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಆಗುತ್ತಿರುವ ಮಳೆಯ ಅವಾಂತರಕ್ಕೆ 71 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಿನ ಸಂಖ್ಯೆ 71 ತಲುಪಿದ್ದು, ಸುಮಾರು 7,500 ಕೋಟಿ ರೂ. ನಷ್ಟವಾಗಿದೆ. ಜನರು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಲ್ಲಿ ತೊಡಗಿರುವುದರಿಂದ ಈ ಅಂದಾಜು ಹೆಚ್ಚುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಸ್ಥಳೀಯ ಜನರು ಸೇರಿದಂತೆ ಸ್ಥಳಾಂತರ ಕಾರ್ಯವನ್ನು ಬೃಹತ್ ಪ್ರಮಾಣದಲ್ಲಿ ನಡೆಸಲಾಗುತ್ತಿದೆ. ಸುಮಾರು 2,500 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣೆಯ ಅಂಕಿ ಅಂಶದ ಪ್ರಕಾರ 1,762 ಮನೆಗಳು ಸಂಪೂರ್ಣ ಹಾನಿಯಾಗಿವೆ. 8,952 ಮನೆಗಳು ಭಾಗಶಃ ಹಾನಿಯಾಗಿವೆ. ಈ ವರ್ಷದ ಮುಂಗಾರು ಋತುವಿನಲ್ಲಿ 113 ಭೂಕುಸಿತಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದೆ.

ಹಿಮಾಚಲದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕಂಗ್ರಾ ಜಿಲ್ಲೆಯಲ್ಲಿ ವೈಮಾನಿಕ ಹಾಗೂ ನೆಲದ ಸಮೀಕ್ಷೆಗಳನ್ನು ನಡೆಸಿದ್ದಾರೆ. ಮಳೆಯ ಅವಾಂತರದಿಂದ ರಾಜ್ಯದಲ್ಲಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು ವರ್ಷವೇ ಬೇಕಾಗಬಹುದು ಎಂದಿದ್ದಾರೆ.

lokesh

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

3 hours ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

3 hours ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

3 hours ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

3 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

3 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

11 hours ago