ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 74 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 44 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464 ಇದೆ. ಕೊನೆಯ 24 ಗಂಟೆಗಳಲ್ಲಿ 6403 ಟೆಸ್ಟ್‌ಗಳು ನಡೆದಿವೆ, 4680 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 1723 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 1.15% ಇದೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 51 ವರ್ಷದ ಸೋಂಕಿತ ಸಾವನ್ನಪ್ಪಿದ್ದಾರೆ.
ಒಟ್ಟು 464 ಸಕ್ರಿಯ ಪ್ರಕರಣಗಳ ಪೈಕಿ 423 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 41 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 16 ಸೋಂಕಿತರು ಐಸಿಯುನಲ್ಲಿದ್ದು, 25 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 2, ಮಂಡ್ಯದಲ್ಲಿ 2 ಹಾಗೂ ಚಾಮರಾಜನಗರದಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 32, ಮಂಡ್ಯದಲ್ಲಿ 5 ಹಾಗೂ ಚಾಮರಾಜನಗರದಲ್ಲಿ 4 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…