ಹಳ್ಳಿಗಳ ಮಟ್ಟದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ: 75ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳನ್ನು ಹಳ್ಳಿಗಳ ಮಟ್ಟದಲ್ಲಿ ಆಯೋಜಿಸಿ ಆಚರಿಸುವಂತೆ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಸ್ವಾತಂತ್ರ್ಯೋತ್ಸವ ಆಚರಣೆ ಕೇವಲ ಸರ್ಕಾರದ ಕಾರ್ಯಕ್ರಮವಾಗಿ ಇರಬಾರದು. ಅದು ಜನರನ್ನೊಳಗೊಂಡ ಕಾರ್ಯಕ್ರಮವಾಗಿರಬೇಕು ಎಂದು ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರು ತಿಳಿಸಿದ್ದಾರೆಂದು ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವೆ ಅರ್ಜುನ್‌ ರಾಮ್‌ ಮೇಘವಾಲ್‌ ತಿಳಿಸಿದ್ದಾರೆ.

ಪ್ರತಿ ಕ್ಷೇತ್ರದಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರನ್ನು ಒಳಗೊಂಡಂತೆ ತಂಡವನ್ನು ರಚಿಸಿ, ಈ ತಂಡವು ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ 2047ರ ವೇಳೆಗೆ, ಸ್ವಾತಂತ್ರ್ಯೋತ್ಸವದ 100ನೇ ವರ್ಷಾಚರಣೆ ವೇಳೆಗೆ ಭಾರತವು ಹೇಗಿರಬೇಕು ಎಂಬ ಕುರಿತು ಅಭಿಪ್ರಾಯ ಸಂಗ್ರಹಿಸುವಂತೆಯೂ ಪ್ರಧಾನಿ ಸೂಚಿಸಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಮಟ್ಟದ ಕ್ರೀಡಾಕೂಟಗಳು, ಸ್ವಚ್ಛತಾ ಅಭಿಯಾನದ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

× Chat with us