75ನೇ ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್‌ನದು ಕಟ್ಟುವ ಪರಂಪರೆ, ಬಿಜೆಪಿಯದ್ದು ಉರುಳಿಸುವ ಪರಂಪರೆ-ಡಿಕೆಶಿ

ಬೆಂಗಳೂರು: ಕಾಂಗ್ರೆಸ್‌ ಭವನದಲ್ಲಿ ಭಾನುವಾರ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ನಮ್ಮದು (ಕಾಂಗ್ರೆಸ್‌) ಕಟ್ಟುವ ಪರಂಪರೆ. ಬಿಜೆಪಿಯವರದ್ದು ಉರುಳಿಸುವ ಪರಂಪರೆ ಎಂದು ಟೀಕಿಸಿದರು.

ದೇಶವನ್ನು ಕಟ್ಟಿದ ಮಹನೀಯರ ಹೆಸರು ಬದಲಿಸುವ ಚರ್ಚೆ ನಡೆಯುತ್ತಿದೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಷಡ್ಯಂತ್ರ ನಡೆದಿದೆ. ಮಹನೀಯರ ಹೆಸರು ಬದಲಿಸಿದರೂ ಅವರು ಜನಮಾನಸದಲ್ಲಿ ಚಿರಸ್ಥಾಯಿ ಎನ್ನುವುದನ್ನು ಮರೆಯಬಾರದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗ ರೆಡ್ಡಿ, ಸಲೀಂ ಅಹಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಇತರರು ಭಾಗವಹಿಸಿದ್ದರು.

× Chat with us