BREAKING NEWS

76ನೇ ಸ್ವಾತಂತ್ರ್ಯ ದಿನಾಚರಣೆ: ವಿಶೇಷ ಆಹ್ವಾನಿತರಾಗಿ ಮಂಡ್ಯ ರೈತನಿಗೆ ಪಿಎಂಒ ಆಹ್ವಾನ

ಮಂಡ್ಯ : ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಆಹ್ವಾನಿತರನ್ನಾಗಿ ಮಂಡ್ಯ ರೈತ ಎನ್.ಹೆಚ್.ವಿರೂಪಾಕ್ಷಪ್ಪ ಅವರನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವು ಆಹ್ವಾನಿಸಿದೆ. ವಿರೂಪಾಕ್ಷಪ್ಪ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಯಾಗಿದ್ದಾರೆ.

ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತರಾಗಿದ್ದಾರೆ. ಪಿಎಂಒ ಕಚೇರಿಯಿಂದ ಆಹ್ವಾನ ಬಂದ ಬಗ್ಗೆ ಸಂತಸ ವ್ಯಕ್ತಪಡಿಸಿದ ವಿರೂಪಾಕ್ಷಪ್ಪ, ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾಗಿರುವುದರಿಂದ ಅಧಿಕೃತವಾಗಿ ನನ್ನನ್ನು ವಿಶೇಷವಾಗಿ ಮಂಡ್ಯ ಜಿಲ್ಲೆಯಿಂದ ಆಹ್ವಾನಿಸಿದ್ದಾರೆ. ಇದಕ್ಕಾಗಿ ಕರ್ನಾಟಕದ ಹಾಗೂ ಜಿಲ್ಲೆಯ ರೈತರ ಪರವಾಗಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಂಡ್ಯ ಜಿಲ್ಲೆಯ ರೈತ ವಿರೂಪಾಕ್ಷಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ. ಇವರನ್ನು ಕಳುಹಿಸಿ ಕೊಡುವಂತೆ ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಸೂಚನೆ ಬಂದಿದೆ. ಹೀಗಾಗಿ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ವಿರೂಪಾಕ್ಷಪ್ಪ ಅವರ ಜೊತೆ ಒಬ್ಬ ಅಧಿಕಾರಿಯನ್ನೂ ಕಳುಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.

ಎ.ನಾಗತಿಹಳ್ಳಿಯಲ್ಲಿ ಗ್ರಾಮದಲ್ಲಿ 4 ಎಕರೆ 10 ಗುಂಟೆ ಜಮೀನುವೊಂದಿರುವ ವಿರೂಪಾಕ್ಷಪ್ಪ, ಪೂರ್ಣ ಜಮೀನಿನಲ್ಲಿ ಸಾವಯವ ಕೃಷಿ ಹಾಗೂ ಉನ್ನತ ಸಾಂದ್ರ ಬೇಸಾಯ ಪದ್ದತಿಯನ್ನ ಅಳವಡಿಸಿಕೊಂಡಿದ್ದಾರೆ. ಜೊತೆಗೆ ಕೃಷಿ ಬೆಳೆ, ರಾಗಿ, ಜೋಳ ಹಾಗೂ ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿದ್ದಾರೆ.

ಜೊತೆಗೆ ಮಾಡಾಗಲ ಮತ್ತು ಡ್ರಾಗನ್ ಫ್ರೂಟ್​​ ಗಿಡಗಳನ್ನ ಬೆಳೆದಿದ್ದು, ಏಲಕ್ಕಿ ಬೆಳೆಯನ್ನು ಬೆಳೆದಿದ್ದಾರೆ. ಇನ್ನು 2022ರಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಹಯೋಗದಲ್ಲಿ ಜಮೀನಿನಲ್ಲಿಯೇ ಪ್ರಾತಕ್ಷಿತೆ ಕೂಡ ನಡೆದಿದೆ. ಸಾವಯವ ಕೃಷಿ ಬಗ್ಗೆ ಆಕಾಶವಾಣಿಯಲ್ಲಿ ಕಾರ್ಯಕ್ರಮ ಸಹಾ ನೀಡಿದ್ದಾರೆ. ಸಾವಿರಾರು ರೈತರು ಇವರ ಜಮೀನಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಇಷ್ಟೆಲ್ಲ ಸಾಧನೆ ಮಾಡಿರುವ ಇವರ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಟ್ಟಿತ್ತು.

ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಇವರನ್ನು ಗುರುತಿಸಿ 76 ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮಕ್ಕೆ ಆ್ವಹಾನ ನೀಡಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಾಮಮಂಗಲದ ಕೃಷಿ ಅಧಿಕಾರಿ ಯೋಗರಾಜ್ ಅವರಿಗೆ ಇವರನ್ನ ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕರೆದುಕೊಂಡು ಬರುವ ಜವಬ್ದಾರಿ ನೀಡಿದೆ.

andolanait

Recent Posts

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

13 mins ago

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…

53 mins ago

ಕೋಲಾರದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಕ ಘಟಕ : ನಾಳೆ ಮೋದಿ-ಮ್ಯಾಕ್ರಾಂ ಚಾಲನೆ

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…

1 hour ago

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

2 hours ago

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

2 hours ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

3 hours ago