BREAKING NEWS

ಕರ್ನಾಟಕದಲ್ಲಿಂದು 78 ಹೊಸ ಕೊವಿಡ್‌ ಪ್ರಕರಣ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆ

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.

ರಾಜ್ಯದಲ್ಲಿ ಇಂದು ( ಡಿಸೆಂಬರ್‌ 22 ) ಒಟ್ಟು 78 ಹೊಸ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 78 ಹೊಸ ಪ್ರಕರಣಗಳು ವರದಿಯಾಗಿದ್ದರೆ, 7 ಜನ ಡಿಸ್‌ಚಾರ್ಜ್‌ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 175 ಇದ್ದು, ಕೊನೆಯ 24 ಗಂಟೆಗಳಲ್ಲಿ 2366 ಟೆಸ್ಟ್‌ಗಳು ನಡೆದಿವೆ, 1947 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 419 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.29% ಇದೆ. ಕಳೆದ 24 ಗಂಟೆಗಳಲ್ಲಿ ಓರ್ವ ಸೋಂಕಿತ ಮೃತಪಟ್ಟಿದ್ದಾರೆ.

ಒಟ್ಟು 175 ಸಕ್ರಿಯ ಪ್ರಕರಣಗಳ ಪೈಕಿ 162 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 13 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 6 ಸೋಂಕಿತರು ಐಸಿಯುನಲ್ಲಿದ್ದು, 7 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

andolanait

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

2 hours ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

2 hours ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

5 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

5 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

5 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

6 hours ago