ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಎಂಟು ಚೀತಾಗಳು ಸಾವನ್ನಪ್ಪಿವೆ. ಆದರೂ ನಮೀಬಿಯಾ ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ ಮತ್ತು ಈ ಯೋಜನೆಯು ಯಶಸ್ವಿಯಾಗಲಿದೆ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರು ಶನಿವಾರ ಹೇಳಿದ್ದಾರೆ.
“ನಾವು ಅಂತಾರಾಷ್ಟ್ರೀಯ ತಜ್ಞರು ಸೇರಿದಂತೆ ಹಲವು ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ. ನಮ್ಮ ತಂಡ ಅಲ್ಲಿಗೆ ಭೇಟಿ ನೀಡಲಿದೆ. ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ. ಅವು ಕುನೋದಲ್ಲೇ ಇರಲಿವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಚೀತಾ ಯೋಜನೆಯ ಬಗ್ಗೆ ಕೆಲವು ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಯಾದವ್ ಅವರು ಈ ಹೇಳಿಕೆ ನೀಡಿದ್ದು, ರೇಡಿಯೊ ಕಾಲರ್‌ಗಳಿಂದ ಉಂಟಾದ ಸೋಂಕಿನಿಂದ ಚೀತಾಗಳು ಮೃತಪಟ್ಟಿರಬಹುದು. ಆದರೆ ಇದು ಹೆಚ್ಚು ಅಸಾಮಾನ್ಯ ಮತ್ತು ಎರಡು ದಶಕಗಳಿಂದ ಭಾರತದಲ್ಲಿ ವನ್ಯಜೀವಿ ಸಂರಕ್ಷಣೆಯಲ್ಲಿ ಈ ಕಾಲರ್‌ಗಳನ್ನು ಬಳಸಲಾಗುತ್ತಿದೆ.
ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿಯು ಚೀತಾಗಳ ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸುತ್ತದೆ ಎಂದು ಇತರ ತಜ್ಞರು ಹೇಳಿದ್ದಾರೆ.