ಆ.23ರಿಂದ ಶಾಲಾರಂಭ: 9, 10ನೇ ತರಗತಿಗೆ ಅರ್ಧ ದಿನ ಪಾಠ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಆ.23ರಿಂದ 9 ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧಾರ ಕೈಗೊಂಡಿದ್ದು, ಪ್ರತಿದಿನ ಅರ್ಧ ದಿನ ಬೆಳಗಿನ ಅವಧಿಯಲ್ಲಿ ತರಗತಿಗಳು ನಡೆಯಲಿವೆ.

ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ತೆರೆಯಲು ಹಾಗೂ 1ರಿಂದ 8ನೇ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ನಂತರ ನಿರ್ಧರಿಸಲಾಗುತ್ತದೆ. ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ. ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಿರಬೇಕು. ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯ ಕುಡಿಯುವ ನೀರನ್ನು ತರಬೇಕು. ಶಾಲೆಗಳಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಿರಬೇಕು. ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್‌ಲೈನ್ ತರಗತಿ ಮುಂದುವರಿಸುವುದು.

ಶಾಲಾ ವೇಳಾಪಟ್ಟಿ

ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30 ಹಾಗೂ ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12.50ರವರೆಗೆ ತರಗತಿಗಳು ನಡೆಯಲಿವೆ.

× Chat with us