ಮುಂಬೈ : ಮಹಾರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನ ಭಾಯಂದರ್ ಪಶ್ಚಿಮದಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಬಯಸಿದ್ದರಿಂದ ಈ ಅಪರಾಧ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ತಿಳಿದುಬಂದಿದೆ.
ಶನಿವಾರ ಸಂಜೆ 4.30 ರ ಸುಮಾರಿಗೆ ಭಾಯಂದರ್ ವೆಸ್ಟ್‌ನ 60 ಅಡಿ ರಸ್ತೆಯಲ್ಲಿರುವ ಶಕ್ತಿ ಜ್ಯುವೆಲರ್ಸ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. “ಬಾಲಕ ಅಂಗಡಿಗೆ ಪ್ರವೇಶಿಸಿ ಚಿನ್ನದ ಬಿಸ್ಕತ್ತುಗಳನ್ನು ಮಾರಾಟ ಮಾಡಲು ಬಯಸುವುದಾಗಿ ಆಭರಣ ವ್ಯಾಪಾರಿಗೆ ತಿಳಿಸಿದನು. ಆಭರಣ ವ್ಯಾಪಾರಿ ಅವುಗಳನ್ನು ಖರೀದಿಸಲು ನಿರಾಕರಿಸಿದನು ಮತ್ತು ಹುಡುಗನನ್ನು ಜ್ಯುವೆಲ್ಲರಿ ಅಂಗಡಿಯಿಂದ ಹೊರಗೆ ಹೋಗುವಂತೆ ಹೇಳಿದನು. ಕೆಲವು ನಿಮಿಷಗಳ ನಂತರ, ಹುಡುಗ ಮತ್ತೆ ಅಂಗಡಿಯನ್ನು ಪ್ರವೇಶಿಸಿದ್ದು, ಈ ಬಾರಿ ಪ್ಲಾಸ್ಟಿಕ್ ಗನ್ ಹಿಡಿದಿದ್ದನು ಎಂದು ಭಾಯಂದರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮುಕುಟರಾವ್ ಪಾಟೀಲ್ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…