ಲಖನೌ : ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗದ (ಯುಪಿಪಿಎಸ್‌ಸಿ) ಪರೀಕ್ಷೆಯಲ್ಲಿ ಬೀಡಾ ಮಾರಾಟಗಾರರೊಬ್ಬರ ಮಗಳು 21 ನೇ ರಾಂಕ್ ಪಡೆದು, ಗೊಂಡಾದಲ್ಲಿ ಉಪ ಉಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿ ನೇಮಕಗೊಂಡಿದ್ದಾರೆ.ಜ್ಯೋತಿ ಚೌರಾಸಿಯಾ ಉತ್ತರ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಅದ್ಭುತ ಸಾಧನೆ ಮಾಡಿ ಕುಟುಂಬಕ್ಕೆ ಹೆಮ್ಮೆ ತಂದಿದ್ದಾರೆ. ಅವರನ್ನು ಉತ್ತರ ಪ್ರದೇಶದ ಗೊಂಡಾದಲ್ಲಿ ಉಪವಿಭಾಗೀಯ ಮ್ಯಾಜಿಸ್ಪ್ರೇಟ್ ಆಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಬಾರ್ ಅಸೋಸಿಯೇಷನ್‌ಗೆ ಅರ್ಹತೆ ಪಡೆದುಕೊಂಡಿದ್ದ ಜ್ಯೋತಿ ಅವರು ಗೊಂಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ರೋಷನ್ ಜಾಕೋಬ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ.
ಜ್ಯೋತಿ ಅವರ ಹಿರಿಯ ಸಹೋದರ ಕೂಡ ಯಶಸ್ವಿ ವೃತ್ತಿಜೀವನ ಬಯಸಿದ್ದರು. ಆದರೆ ಹಣಕಾಸಿನ ಸಮಸ್ಯೆಗಳ ಕಾರಣದಿಂದ ಅವರು ಬೀಡಾ ಮಾರಾಟ ಅಂಗಡಿ ಸೇರಿಕೊಂಡು ತಂದೆಗೆ ಜತೆಯಾದರು. ಜ್ಯೋತಿಯ ತಂದೆ ಹೇಮ್ ಚಂದ್ ಚೌರಾಸಿಯಾ ಮೂಲತಃ ಡಿಯೋರಿಯಾ ಜಿಲ್ಲೆಯವರಾಗಿದ್ದು, ಗೊಂಡಾದಲ್ಲಿ ಕೆಲಸ ಸಿಗದ ಕಾರಣ ತಮ್ಮ ಕುಟುಂಬವನ್ನು ಪೋಷಿಸಲು 1997ರ ಫೆಬ್ರವರಿಯಲ್ಲಿ ಬೀಡಾ ಅಂಗಡಿ ತೆರೆದಿದ್ದರು. ನಂತರ 2000ನೇ ಇಸವಿಯಲ್ಲಿ ತಮ್ಮ ಇಬ್ಬರೂ ಮಕ್ಕಳನ್ನು ಗೊಂಡಾಕ್ಕೆ ಕರೆತಂದಿದ್ದರು.
ಗೊಂಡಾದಲ್ಲಿ ಜ್ಯೋತಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದರು. ಬಳಿಕ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ತಯಾರಿ ನಡೆಸಲು ಲಖನೌಗೆ ತೆರಳಿದರು. ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗಳ ಹೊರತಾಗಿಯೂ, 6ನೇ ಪ್ರಯತ್ನದಲ್ಲಿ ಯಶಸ್ವಿಯಾದರು. ಪ್ರತಿಷ್ಠಿತ ಉದ್ಯೋಗವನ್ನು ಪಡೆಯುವುದು ಮತ್ತು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇವೆ ಸಲ್ಲಿಸುವುದು ಜ್ಯೋತಿಯ ಬಯಕೆಯಾಗಿದೆ. ಅವರ ಈ ಸಾಧನೆಯನ್ನು ಗೊಂಡಾದಲ್ಲಿನ ಜನರು, ಜ್ಯೋತಿ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಸಂಭ್ರಮಿಸುತ್ತಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…