BREAKING NEWS

ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಕ ಸಾವು

ಮೈಸೂರು : ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ.
ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಮೃತ ಬಾಲಕ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ ಪುತ್ರ. ಬಾಲಾಜಿ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ವೇಗವಾದ ಸೈಕಲ್ ಚಾಲನೆಯಿಂದ ಮಕ್ಕಳು ಸೈಕಲ್ ನಿಯಂತ್ರಣವನ್ನು ಕಳೆದುಕೊಂಡಿದ್ದು, ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಾಜಿ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ಬಾಲಕ ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

1 hour ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago