BREAKING NEWS

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ಸಂಕ್ಷಿಪ್ತ ಪರಿಚಯ

ಹಾಸನ: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75) ಗುರುವಾರ ನಿಧನರಾದರು. ಅವರ ಕುರಿತಾದ ಸಂಕ್ಷಿಪ್ತ ಪರಿಚಯ ಇಲ್ಲಿದೆ…

03-05-1949ರಲ್ಲಿ ವರಂಗದಲ್ಲಿ ಜನಿಸಿದರು. ಪೂವಾ೯ಶ್ರಮದ ಹೆಸರು ರತ್ನಾಕರ. ತಂದೆಯ ಹೆಸರು ಕೀರ್ತಿಶೇಷ ಚಂದ್ರರಾಜ. ತಾಯಿಯ ಹೆಸರು ಮಾತೃಶ್ರೀ ಕಾಂತಮ್ಮ. ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಲ್ಲಿ ಪ್ರಾರಂಭಿಸಿ, ಹೊಂಬುಜ ಹಾಗೂ ವಿವಿಧ ಜೈನ ಮಠಗಳಲ್ಲಿ ಕನ್ನಡ, ಸಂಸ್ಕೃತ, ಪ್ರಾಕೃತ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರಾವೀಣ್ಯತೆಯನ್ನು ಪಡೆದರು. ಸತತ ಜೈನ ಧರ್ಮದ ತತ್ವಶಾಸ್ತ್ರ ಅಧ್ಯಯನ ಕೈಗೊಂಡರು. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ.ಇತಿಹಾಸ, ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ.ತತ್ವಶಾಸ್ತ್ರಗಳ ಸ್ನಾತಕೋತ್ತರ ಪದವಿಗಳನ್ನು ಪಡೆದರು.

ಶ್ರೀಗಳು 12-12-1969ರಲ್ಲಿ ಕ್ಷುಲ್ಲಕ ದೀಕ್ಷೆ ಸ್ವೀಕರಿಸಿದರು.

1970ರಲ್ಲಿ ಶ್ರವಣಬೆಳಗೊಳದ ಮಠದ ಮಠಾಧೀಶರಾದರು. ಬಳಿಕ ಎಸ್.ಡಿ.ಜೆ.ಎಂ.ಐ ಟ್ರಸ್ಟ್ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಪ್ರಾಥಮಿಕ ಶಿಕ್ಷಣದಿಂದ ಎಂಜಿನಿಯರಿಂಗ್ ಕಾಲೇಜು ಶಿಕ್ಷಣದವರೆಗೆ ಅದನ್ನು ಕೊಂಡೊಯ್ಯದ ಕೀರ್ತಿ ಪೂಜ್ಯ ಶ್ರೀಗಳಿಗೆ ಸಲ್ಲುತ್ತದೆ.

ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಪ್ರಾಕೃತ ಭಾಷೆಗೆ ಮರುಜೀವ ತುಂಬಿದರು. ಪ್ರಾಕೃತ ವಿದ್ವಾಂಸರಿಗೆ- ಪ್ರಾಕೃತ ಜ್ಞಾನಭಾರತಿ ಪ್ರಶಸ್ತಿ, ಜೈನ ಸಾಹಿತ್ಯ ಸಂಸ್ಕೃತಿಗಳಿಗೆ- ಶ್ರೀ ಗೋಮಟೇಶ್ವರ ವಿದ್ಯಾಪೀಠ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿನಿಧಿ, ಕನ್ನಡ ಜೈನ ಸಾಹಿತ್ಯ ಸೇವೆಗೆ- ಚಾವುಂಡರಾಯ ಪ್ರಶಸ್ತಿಗಳನ್ನು ಸ್ಥಾಪಿಸಿ, ವಿಶೇಷ ಸಾಧಕರಿಗೆ ಅವುಗಳನ್ನು ನೀಡಿ ಗೌರವಿಸುತ್ತ ಬರುತ್ತಿದ್ದರು.

ಮಹಾಧವಲಾ ಗ್ರಂಥಗಳ 42 ಸಂಪುಟಗಳ ಕನ್ನಡ ಅನುವಾದ ಮಾಡಿಸಿ, ಅವುಗಳನ್ನು ಪ್ರಕಟಿಸಿ ಅವಿಸ್ಮರಣೀಯ ಕಾರ್ಯ ಕೈಗೊಂಡರು.

ಪ್ರಶಸ್ತಿಗಳು: ಪೂಜ್ಯ ಶ್ರೀಗಳ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಕ್ಷೇತ್ರದಲ್ಲಿನ ಸೇವೆಗಾಗಿ: ಕರ್ಮಯೋಗಿ, ಅಧ್ಯಾತ್ಮ ಯೋಗಿ, ಭಟ್ಟಾರಕ ಶಿರೋಮಣಿ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ವಿದೇಶ ಪ್ರವಾಸ: ಪೂಜ್ಯ ಶ್ರೀಗಳು 16ಕ್ಕೂ ಹೆಚ್ಚು ದೇಶಗಳಲ್ಲಿ ಜರುಗಿದ ವಿಚಾರ ಸಂಕಿರಣ, ಧರ್ಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸರಳಶೈಲಿ ಪ್ರವಚನಗಳಿಂದ ಶ್ರಾವಕರ ಮನ ಗೆದ್ದಿದ್ದಾರೆ. ಶ್ರೀಗಳು ಜೈನ ಧರ್ಮ ಇಂದಿಗೂ ತನ್ನತನ ಉಳಿಸಿಕೊಂಡು ಬರುವುದಕ್ಕೆ ಪ್ರಮುಖ ಕಾರಣ ಜೈನ ತತ್ವಶಾಸ್ತ್ರ ಗ್ರಂಥಗಳು ಹಾಗೂ ಜೈನ ವಾಸ್ತುಶಿಲ್ಪ ಕಲೆ ಎಂಬುದನ್ನು ಅರಿತು ಬಸದಿಗಳ ಜೀರ್ಣೋದ್ದಾರ, ಜೈನ ಸಾಹಿತ್ಯ ಪ್ರಕಟಣೆಗೆ ವಿಶೇಷವಾಗಿ ಒತ್ತು ನೀಡಿದ್ದಾರೆ. ಅವುಗಳ ಸಂರಕ್ಷಣೆಗಾಗಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇಲ್ಲಿಯವರೆಗೆ ನಾಲ್ಕು ಮಹಾಮಸ್ತಕಾಭಿಷೇಕಗಳು ಶ್ರೀಗಳ ನೇತೃತ್ವದಲ್ಲಿ ನೆರವೇರಿವೆ.

ಶ್ರೀ ಬಾಹುಬಲಿ ಮಕ್ಕಳ ಆಸ್ಪತ್ರೆ, ವೃದ್ದಾಶ್ರಮಗಳಂಥ ಸಮಾಜಮುಖಿ ಹಾಗೂ ಇನ್ನೂ ಹತ್ತು ಹಲವು ಕ್ಷೇತ್ರದಲ್ಲಿ ತಮ್ಮ ಸೇವೆಯನ್ನು ನಿರ್ವಹಿಸುತ್ತಾ ಈ ನಾಡಿನಲ್ಲಿ ಶಾಂತಿ ನೆಲೆಸಲು ಸತತ 50 ವರ್ಷಗಳ ಸೇವೆಯನ್ನು ಸಮಾಜಕ್ಕೆ ಸಲ್ಲಿಸುತ್ತಾ ಬಂದಿದ್ದಾರೆ. ಇದನ್ನು ಅರಿತ ಕನಾ೯ಟಕ ಸರ್ಕಾರವು 2018ರ ರಾಷ್ಟ್ರೀಯ ಶ್ರೀ ಭ.ಮಹಾವೀರ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಹೆಮ್ಮೆಯ ವಿಷಯವಾಗಿದೆ. ಇದು ₹ 10 ಲಕ್ಷ ನಗದು ಹಾಗೂ ಫಲಕವನ್ನು ಹೊಂದಿದೆ.

ಅವರನ್ನು ಎಲ್ಲ ಜಾತಿ, ಮತ, ಪಂಥಗಳ ಭಕ್ತರೂ ಅತಿಯಾಗಿ ಗೌರವಿಸುವ, ಆದರಿಸುವ, ಪ್ರೀತಿಸುವ, ಅದೆಲ್ಲವೂಗಳಿಗಿಂತ ಅವರನ್ನು ಕಂಡರೆ ಹೆಚ್ಚು ಭಕ್ತಿ, ಅತಿ ಕಡಿಮೆ ಭಯ, ಇನ್ನೂ ಜಾಸ್ತಿ ಪ್ರೀತಿ, ಹೆಚ್ಚಿನ ಅಭಿಮಾನ ಇಟ್ಟುಕೊಳ್ಳುವುದಕ್ಕೆ ಕಾರಣ.

ತಾವಾಯಿತು ತಮ್ಮ ಕೆಲಸವಾಯಿತು. ಪೂಜೆ, ಧಾರ್ಮಿಕ ಕಾರ್ಯಗಳು ಜೊತೆಗೆ ಮಾತುಕತೆ, ಅಧ್ಯಯನ, ಧಾರ್ಮಿಕ ಆಚರಣೆಗಳಲ್ಲಿ ಸ್ವಾಮೀಜಿ ಸದಾ ನಿರತರು. ಮಹಾ ಮಸ್ತಕಾಭಿಷೇಕ ಸಂದರ್ಭಗಳಲ್ಲಿ ಮಾತ್ರ ಪತ್ರಿಕೆ, ದೂರದರ್ಶನಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.

andolanait

Recent Posts

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…

5 mins ago

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

45 mins ago

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

2 hours ago

ಓದುಗರ ಪತ್ರ: ಐಪಿಎಲ್‌ನಲ್ಲಿ ಭಾರತೀಯ ಆಟಗಾರರೇ ಆಡಲಿ

೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’  (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ.  ಐಪಿಎಲ್ ತಂಡಗಳಲ್ಲಿ …

2 hours ago

ಓದುಗರ ಪತ್ರ: ಮೆಟ್ರೋ ಪ್ರಯಾಣ ದರ ಏರಿಕೆ ಸಲ್ಲದು

ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …

2 hours ago

ಓದುಗರ ಪತ್ರ: ರಾಮಕೃಷ್ಣನಗರದ ಮುಖ್ಯ ರಸ್ತೆಗೆ ಡಾಂಬರ್ ಹಾಕಿ

ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ  ಪೈಪ್‌ಗಳನ್ನು  ಅಳವಡಿಸಲು ರಸ್ತೆಯನ್ನು  ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…

2 hours ago