ಚಾಮರಾಜನಗರ : ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಹೊರ ಬರಲಾರದೆ ಸಜೀವ ದಹನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ದುರ್ಘಟನೆ ನಡೆದಿದೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಮೈಸೂರು ಮೂಲದ ಮುಜಾಮಿಲ್ ಅಹಮದ್ ಎಂದು ಗುರುತಿಸಲಾಗಿದೆ.
ಕಳೆದ ಒಂದು ವಾರದ ಹಿಂದೆ ಪಾರ್ವತಮ್ಮ ರಾಜ್‌ಕುಮಾರ್ ತಮ್ಮನ ಪುತ್ರ ಸೂರಜ್‌ಗೆ ಅಪಘಾತವಾಗಿದ್ದ ಸಮೀಪದ ಸ್ಥಳದಲ್ಲೇ ಮತ್ತೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಸ್ಥಳಕ್ಕೆ ಚಾಮರಾಜನಗರ ಎಸ್‌ಪಿ ಪದ್ಮಿನಿ ಸಾಹು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಗೂರು ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…