ಮಹಾರಾಷ್ಟ್ರ : ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿನ ದೇವಾಲಯವೊಂದರ ಆವರಣದಲ್ಲಿದ್ದ ಟಿನ್ ಶೆಡ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಅಲ್ಲಿ ಆಶ್ರಯ ಪಡೆದಿದ್ದ 7 ಮಂದಿ ಮೃತಪಟ್ಟಿದ್ದಾರೆ.
ಬಾಲಾಪುರ್ ತಾಲ್ಲೂಕಿನ ಪರಾಸ್ ಹಳ್ಳಿಯಲ್ಲಿರುವ ಬಾಬುಜಿ ಮಹಾರಾಜ್ ದೇವಾಲಯದಲ್ಲಿ ಭಾನುವಾರ ರಾತ್ರಿ 7.30ರ ಸುಮಾರಿಗೆ ದುರಂತ ಸಂಭವಿಸಿದ್ದು, ಈ ಬಗ್ಗೆ ಸ್ಥಳೀಯ ಆಡಳಿತ ಸೋಮವಾರ ಮಾಹಿತಿ ನೀಡಿದೆ.
ಪೂಜಾ ಕಾರ್ಯಕ್ರಮದ ಸಲುವಾಗಿ ಜನರು ದೇವಾಲಯಕ್ಕೆ ಆಗಮಿಸಿದ್ದರು. ಶತಮಾನದಷ್ಟು ಹಳೆಯ ಮರ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಟಿನ್ ಶೆಡ್ ಮೇಲೆ ಬಿದ್ದಿದೆ. 40 ಜನರು ಅಲ್ಲಿ ಆಶ್ರಯ ಪಡೆದಿದ್ದರು. ಈ ಪೈಕಿ 7 ಮಂದಿ ಮೃತಪಟ್ಟು, 23 ಜನರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಅಕೋಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…