Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ : ತಪ್ಪಿದ ಭಾರಿ ಅನಾಹುತ

ಕಣ್ಣೂರು : ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.

ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

ಆದರೆ, ಇದು ಉದ್ದೇಶಪೂರ್ವಕ ಕೃತ್ಯವೇ ಅಥವಾ ವಿದ್ಯುತ್ ದೋಷವೇ ಬೆಂಕಿ ತಲುಗಲು ಕಾರಣವೇ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ