Mysore
24
scattered clouds

Social Media

ಬುಧವಾರ, 06 ಮೇ 2026
Light
Dark

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬೆಂಗಳೂರು: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟಿನ್ ಕೋರ್ಟ್ ಆದೇಶ ಹೊರಡಿಸಿದೆ.

ಕೆಪಿಸಿಸಿ ವಕ್ತಾರ ಲಕ್ಷ್ಮಣ ವಿರುದ್ಧ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು, ಎಂ ಲಕ್ಷ್ಮಣ್ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಆದೇಶ ಹೊರಡಿಸಿದ್ದಾರೆ.

ಅಲ್ಲದೆ, ಎಂ ಲಕ್ಷ್ಮಣ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಲು ಕೋರ್ಟ್ ಅನುಮತಿ ನೀಡಿದೆ. ಜೂನ್ 12 ರಂದು ಖುದ್ದು ಹಾಜರಾಗುವಂತೆ ಲಕ್ಷ್ಮಣ್​ಗೆ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!