BREAKING NEWS

ಹಾವನ್ನು ಜಗಿದು ತಿಂದ ಜಿಂಕೆ: ವಿಡಿಯೋ ನೋಡಿ.!

ನವದೆಹಲಿ: ಭಾರತೀಯ ಅರಣ್ಯ ಸೇವೆ (IFS)ಯ ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು, ವನ್ಯಜೀವಿಗಳ ಅದ್ಭುತವಾದ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಟ್ವೀಟರ್‌ ಫಾಲೋವರ್ಸ್‌ ಗೆ ಅಚ್ಚರಿಯ ಘಟನೆಯನ್ನು ಉಣಬಡಿಸುತ್ತಾರೆ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಜಿಂಕೆಯೊಂದು ಹಾವನ್ನು ಜಗಿದು ತಿನ್ನುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಗಮನಿಸಬೇಕಾದ ಅಂಶವೇನೆಂದರೆ ಜಿಂಕೆಯನ್ನು ಸಸ್ಯಹಾರಿ ಎಂದು ಪರಿಗಣಿಸುತ್ತೇವೆ. ಹುಲ್ಲು, ಎಳೆಯ ಎಲೆಗಳು ಜಿಂಕೆಯ ಆಹಾರವಾಗಿದೆ. ಆದರೆ ಜಿಂಕೆ ಹಾವನ್ನು ಜಗಿದು ತಿನ್ನುತ್ತಿರುವ ಅಪರೂಪದ ಘಟನೆಯ ವಿಡಿಯೋವನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸೆರೆ ಹಿಡಿದಿದ್ದು, ಅದನ್ನು ನಂದಾ ಅವರು ತಮ್ಮ ಟ್ವೀಟರ್‌ ಹ್ಯಾಂಡಲ್‌ ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.
“ಕಾಡಿನ ಪ್ರದೇಶದ ರಸ್ತೆ ಸಮೀಪ ನಿಂತಿದ್ದ ಜಿಂಕೆಯೊಂದು ಹಾವನ್ನು ಜಗಿದು ತಿನ್ನುತ್ತಿದ್ದು, ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಚಿತ್ರೀಕರಣ ಮಾಡುತ್ತಾ..ಜಿಂಕೆ ಹಾವನ್ನು ತಿನ್ನುತ್ತಿದೆಯಾ ? ಎಂಬ ಅಚ್ಚರಿಯ ಉದ್ಘಾರ” ವಿಡಿಯೋದಲ್ಲಿ ಸೆರೆಯಾಗಿದೆ.
ವೈರಲ್‌ ಆದ ವಿಡಿಯೋದ ಜತೆಗೆ “ಕ್ಯಾಮರಾಗಳು ಕೂಡಾ ಈಗ ಪ್ರಕೃತಿಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ನೆರವು ನೀಡುತ್ತಿದೆ. ಹೌದು ಕೆಲವೊಮ್ಮ ಸಸ್ಯಹಾರಿ ಪ್ರಾಣಿಗಳು ಹಾವನ್ನು ತಿನ್ನುತ್ತವೆ” ಎಂಬ ಕ್ಯಾಪ್ಶನ್‌ ನೀಡಲಾಗಿದೆ.
andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

8 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago