ಬೆಂಗಳೂರು : ʼʼಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆʼʼ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ʼʼಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕುʼʼ ಎಂದು ಒತ್ತಾಯಿಸಿದೆ.
ʼʼಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ.ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನʼʼ ಎಂದು ಕಾಂಗ್ರೆಸ್ ಕಿಡಿಕಾರಿದೆ.
ʼʼಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆʼʼ ಎಂದು ಕಾಂಗ್ರೆಸ್ ದೂರಿದೆ.
ʼʼನಮ್ಮ ದುರಾದೃಷ್ಟ ಎಂದ್ರೇ ಆ ಭಾಗದವರು ಫಾರೆಸ್ಟ್ ಮಿನಿಸ್ಟರ್ ಅಗಿದ್ದಾರೆ. ಫಾರೆಸ್ಟ್ ಇಲ್ಲದವರು ಮಿನಿಸ್ಟರ್ ಅಗಿದ್ದಾರೆ. ಅವರಿಗೆ ಮರ- ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ, ಮರದ ನೆರಳು ಗೊತ್ತಿಲ್ಲ..ಸುಟ್ಟು ಕರಕಲಾಗಿರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ, ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆʼʼ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…