Mysore
14
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಜೇಡ ಕಚ್ಚಿ ಖ್ಯಾತ ಗಾಯಕ ಸಾವು

ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್, ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ. ಬ್ರೆಜಿಲಿಯನ್ ನ ಈ ಗಾಯಕನಿಗೆ ಕೇವಲ 28 ವರ್ಷ ವಯಸ್ಸಾಗಿತ್ತು. ಅತೀ ಕಡಿಮೆ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಅಭಿಮಾನಿಗಳಿಗೆ ಶಾಕ್ ಆಗಿದೆ.

ಜೇಡ ಕಚ್ಚಿದ ದಿನವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಕೂಡ ಪಡೆದಿದ್ದರು. ಮನೆಗೆ ಬಂದ ಬಳಿಕ ತೀವ್ರ ಆಯಾಸದಿಂದ ಬಳಲುತ್ತಿದ್ದರು. ದಿನದಿಂದ ದಿನಕ್ಕೆ ಅವರ ದೇಹದ ಬಣ್ಣ ಕೂಡ ಬದಲಾಗುತ್ತಿದ್ದು, ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಅತೀ ಚಿಕ್ಕ ವಯಸ್ಸಿನಲ್ಲೇ ಅಪಾರ ಸಂಗೀತ ಜ್ಞಾನವನ್ನು ಹೊಂದಿದ್ದರು ಡಾರ್ಲಿನ್. ಜಬುಂಬಾ ಸೇರಿದಂತೆ ಹಲವು ವಾದ್ಯಗಳನ್ನು ಅವರು ನುಡಿಸುತ್ತಿದ್ದರು. ವಾದ್ಯ ಮತ್ತು ಹಾಡಿನ ಮೂಲಕ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದರು. ಅಗಲಿದ ನೆಚ್ಚಿನ ಗಾಯಕನಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!