BREAKING NEWS

ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಕಾಲಿಗೆ ಜಿಪಿಎಸ್‌ ಬಳೆ

ಶ್ರೀನಗರ : ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಮೇಲೆ ನಿಗಾ ಇಡಲು ಅವರ ಕಾಲಿಗೆ ಜಿಪಿಎಸ್ ಆಧಾರಿತ ಬಳೆಯನ್ನು ಜಮ್ಮು ಕಾಶ್ಮೀರ ಪೊಲೀಸರು ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಬಂಧನಕ್ಕೆ ಒಳಗಾದ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ ದೇಶದ ಮೊದಲ ಪೊಲೀಸ್‌ ಪಡೆ ಎಂಬ ಹೆಗ್ಗಳಿಗೆ ಜಮ್ಮು ಕಾಶ್ಮೀರ ಪೊಲೀಸರು ಪಾತ್ರರಾಗಿದ್ದಾರೆ.

ಜಿಪಿಎಸ್‌ ಟ್ರ್ಯಾಕರ್ ಆಂಕ್ಲೆಟ್ ವ್ಯಕ್ತಿಯ ಪಾದದ ಸುತ್ತಲೂ ಧರಿಸಬಹುದಾದ ಸಾಧನವಾಗಿದ್ದು, ಮೇಲ್ವಿಚಾರಣೆ ಮಾಡಲು ಮತ್ತು ಅವರ ಚಲನೆಯನ್ನು ಟ್ರ್ಯಾಕ್ ಮಾಡುತ್ತದೆ. ಜಾಮೀನು, ಪೆರೋಲ್ ಮತ್ತು ಗೃಹಬಂಧನದಲ್ಲಿರುವ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಲು ಮತ್ತು ಜೈಲುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಈ ಸಾಧನವನ್ನು ಈಗಾಗಲೇ ಅಮೆರಿಕ, ಯುನೈಟೆಡ್‌ ಕಿಂಗ್‌ಡಮ್‌, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಬಳಸಲಾಗುತ್ತಿದೆ.

ಹಲವು ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಗುಲಾಂ ಮೊಹಮ್ಮದ್‌ ಭಟ್‌ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಈತನ ಜಾಮೀನು ಅರ್ಜಿಯನ್ನು ಆಲಿಸಿದ ಜಮ್ಮು ಕಾಶ್ಮೀರದಲ್ಲಿರುವ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ ಪೊಲೀಸರಿಗೆ ಜಿಪಿಎಸ್ ಆಧಾರಿತ ಸಾಧನ ಅಳವಡಿಸಲು ಸೂಚಿಸಿ ಜಾಮೀನು ಮಂಜೂರು ಮಾಡಿತು. ಪ್ರಸ್ತುತ ಈ ಸಾಧನವನ್ನು ದೇಶದ್ರೋಹ ಪ್ರಕರಣದಡಿ ಬಂಧಿತರಾಗುವ ಆರೋಪಿಗಳಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ.

ಆರೋಪಿ ಗುಲಾಂ ಮೊಹಮ್ಮದ್‌ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್‌ನ ಆಜ್ಞೆಯ ಮೇರೆಗೆ ಭಯೋತ್ಪಾದನಾ ಸಂಘಟನೆಗೆ ಹಣಕಾಸಿನ ನೆರವು ನೀಡುವಲ್ಲಿ ತೊಡಗಿಸಿಕೊಂಡಿದ್ದ. ಉಗ್ರರಿಗೆ 2.5 ಲಕ್ಷ ರೂ. ಹಣವನ್ನು ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಆತನನ್ನು ಬಂಧಿಸಲಾಗಿತ್ತು.

lokesh

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

1 hour ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

2 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

2 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

3 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

4 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

6 hours ago