Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಹೊಸಬೂದನೂರು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳ ಹಿಂಡು ಪ್ರತ್ಯಕ್ಷ

ಮಂಡ್ಯ : ತಾಲ್ಲೂಕಿನ ಹೊಸ ಬೂದನೂರು ಹಾಗೂ ಹಳೆಬೂದನೂರು ನಡುವೆ ಇರುವ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಪ್ರತ್ಯಕ್ಷವಾಗಿವೆ.

ಚನ್ನಪಟ್ಟಣದ ಅರಣ್ಯ ಪ್ರದೇಶಗಳಿಂದ ಆಗಮಿಸಿರುವ ಈ ಆನೆಗಳ ಹಿಂಡು ಶನಿವಾರ ರಾತ್ರಿ ತಾಲೂಕಿನ ಅಂಬರ ಹಳ್ಳಿ ಸಮೀಪದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳನ್ನು ಕಾಡಿಗೆ ಹಟ್ಟಲು ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯತ್ನಿಸಿದರಾದರೂ ಈ ಆನೆಗಳ ಹಿಂಡು, ಕಾಡಿನತ್ತ ಹೋಗದೆ ಮತ್ತೆ ನಾಡಿನತ್ತ ಬಂದು ಕಬ್ಬಿನ ಗದ್ದೆಯನ್ನು ಸೇರಿಕೊಂಡವು.

ಮಧ್ಯರಾತ್ರಿವರೆಗೂ ಮಂಡ್ಯ ಅರಣ್ಯ ಇಲಾಖೆಯ ಎಸಿಎಫ್ ಮಹದೇವಸ್ವಾಮಿ ಮತ್ತು ತಂಡ ಆನೆಗಳನ್ನು ಕಾಡಿನತ್ತ ಅಟ್ಟಲು ಪ್ರಯತ್ನಿಸಿದರಾದರು ಅದು ಸಫಲವಾಗಲಿಲ್ಲ. ಇದರಿಂದಾಗಿ ಭಾನುವಾರ ಕಾರ್ಯಾಚರಣೆ ನಡೆಸಲು ನಿರ್ಧರಿಸಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

ಭಾನುವಾರ ಬೆಳಿಗ್ಗೆ ತಾಲೂಕಿನ ಹೊಸ ಬೂದನೂರು ಗ್ರಾಮದ ಸಮೀಪವಿರುವ ಲೆಮನ್ ಗ್ರಾಸ್ ಹೋಟೆಲ್ ಹಿಂಭಾಗದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳ ಹಿಂಡನ್ನು ನೋಡಿ ಸಾರ್ವಜನಿಕರು ಭಯಭೀತರಾಗಿ ತಕ್ಷಣ ಅರಣ್ಯ ಇಲಾಖೆಯವರಿಗೆ ವಿಷಯ ಮುಟ್ಟಿಸಿದರು.

ತಕ್ಷಣ ಎಸಿಎಫ್ ಮಹಾದೇವಸ್ವಾಮಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರಾದರು ಆನೆಗಳ ಹಿಂಡು, ಕಬ್ಬಿನ ಗದ್ದೆಯನ್ನು ಸೇರಿಕೊಂಡವು ಇದರಿಂದಾಗಿ ಅವುಗಳನ್ನು ಕಾಡಿಗೆ ಅಟ್ಟಲು ಸಾಧ್ಯವಾಗಲಿಲ್ಲ ಇದರಿಂದಾಗಿ ಸಂಜೆ ಕಾರ್ಯಾಚರಣೆ ನಡೆಸಿ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶ ಅಥವಾ ಚನ್ನಪಟ್ಟಣದ ಅರಣ್ಯ ಪ್ರದೇಶಕ್ಕೆ ಅಟ್ಟಲು ನಿರ್ಧರಿಸಿದರು.

ಸಂಜೆ 6 ನಂತರ ಕಾರ್ಯಾಚರಣೆ ನಡೆಸಿ ಕಾಡಿನತ್ತ ಕಳುಹಿಸಲು ನಿರ್ಧರಿಸಿದ್ದಾರೆ. ವಿಷಯ ತಿಳಿದು ಮಂಡ್ಯ ತಾಲೂಕು ತಹಸಿಲ್ದಾರ್ ಬಿರಾದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲೇ ಎಸಿಎಫ್ ಮಹಾದೇವಸ್ವಾಮಿ ಹಾಗೂ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಜನರು ಆನೆಗಳತ್ತ ಸುಳಿಯದಂತೆ ಎಚ್ಚರಿಕೆ ವಹಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ