BREAKING NEWS

ಹೊಸಬೂದನೂರು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳ ಹಿಂಡು ಪ್ರತ್ಯಕ್ಷ

ಮಂಡ್ಯ : ತಾಲ್ಲೂಕಿನ ಹೊಸ ಬೂದನೂರು ಹಾಗೂ ಹಳೆಬೂದನೂರು ನಡುವೆ ಇರುವ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಪ್ರತ್ಯಕ್ಷವಾಗಿವೆ.

ಚನ್ನಪಟ್ಟಣದ ಅರಣ್ಯ ಪ್ರದೇಶಗಳಿಂದ ಆಗಮಿಸಿರುವ ಈ ಆನೆಗಳ ಹಿಂಡು ಶನಿವಾರ ರಾತ್ರಿ ತಾಲೂಕಿನ ಅಂಬರ ಹಳ್ಳಿ ಸಮೀಪದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳನ್ನು ಕಾಡಿಗೆ ಹಟ್ಟಲು ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯತ್ನಿಸಿದರಾದರೂ ಈ ಆನೆಗಳ ಹಿಂಡು, ಕಾಡಿನತ್ತ ಹೋಗದೆ ಮತ್ತೆ ನಾಡಿನತ್ತ ಬಂದು ಕಬ್ಬಿನ ಗದ್ದೆಯನ್ನು ಸೇರಿಕೊಂಡವು.

ಮಧ್ಯರಾತ್ರಿವರೆಗೂ ಮಂಡ್ಯ ಅರಣ್ಯ ಇಲಾಖೆಯ ಎಸಿಎಫ್ ಮಹದೇವಸ್ವಾಮಿ ಮತ್ತು ತಂಡ ಆನೆಗಳನ್ನು ಕಾಡಿನತ್ತ ಅಟ್ಟಲು ಪ್ರಯತ್ನಿಸಿದರಾದರು ಅದು ಸಫಲವಾಗಲಿಲ್ಲ. ಇದರಿಂದಾಗಿ ಭಾನುವಾರ ಕಾರ್ಯಾಚರಣೆ ನಡೆಸಲು ನಿರ್ಧರಿಸಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

ಭಾನುವಾರ ಬೆಳಿಗ್ಗೆ ತಾಲೂಕಿನ ಹೊಸ ಬೂದನೂರು ಗ್ರಾಮದ ಸಮೀಪವಿರುವ ಲೆಮನ್ ಗ್ರಾಸ್ ಹೋಟೆಲ್ ಹಿಂಭಾಗದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳ ಹಿಂಡನ್ನು ನೋಡಿ ಸಾರ್ವಜನಿಕರು ಭಯಭೀತರಾಗಿ ತಕ್ಷಣ ಅರಣ್ಯ ಇಲಾಖೆಯವರಿಗೆ ವಿಷಯ ಮುಟ್ಟಿಸಿದರು.

ತಕ್ಷಣ ಎಸಿಎಫ್ ಮಹಾದೇವಸ್ವಾಮಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರಾದರು ಆನೆಗಳ ಹಿಂಡು, ಕಬ್ಬಿನ ಗದ್ದೆಯನ್ನು ಸೇರಿಕೊಂಡವು ಇದರಿಂದಾಗಿ ಅವುಗಳನ್ನು ಕಾಡಿಗೆ ಅಟ್ಟಲು ಸಾಧ್ಯವಾಗಲಿಲ್ಲ ಇದರಿಂದಾಗಿ ಸಂಜೆ ಕಾರ್ಯಾಚರಣೆ ನಡೆಸಿ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶ ಅಥವಾ ಚನ್ನಪಟ್ಟಣದ ಅರಣ್ಯ ಪ್ರದೇಶಕ್ಕೆ ಅಟ್ಟಲು ನಿರ್ಧರಿಸಿದರು.

ಸಂಜೆ 6 ನಂತರ ಕಾರ್ಯಾಚರಣೆ ನಡೆಸಿ ಕಾಡಿನತ್ತ ಕಳುಹಿಸಲು ನಿರ್ಧರಿಸಿದ್ದಾರೆ. ವಿಷಯ ತಿಳಿದು ಮಂಡ್ಯ ತಾಲೂಕು ತಹಸಿಲ್ದಾರ್ ಬಿರಾದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲೇ ಎಸಿಎಫ್ ಮಹಾದೇವಸ್ವಾಮಿ ಹಾಗೂ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಜನರು ಆನೆಗಳತ್ತ ಸುಳಿಯದಂತೆ ಎಚ್ಚರಿಕೆ ವಹಿಸಿದ್ದಾರೆ.

lokesh

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

4 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

5 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

9 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

9 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

9 hours ago