ರಾಮನಗರ ; ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಿರತೆಯೊಂದು ವಾಹನ ಡಿಕ್ಕಿಯಾಗಿ ಮೃತಪಟ್ಟಿದೆ. ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿಯಾದ ವಾಹನ ಯಾವುದೆನ್ನುವುದು ಪತ್ತೆಯಾಗಿಲ್ಲ.
ದಶಪಥ ರಸ್ತೆ ದಾಟಲು ಹೋಗಿದ್ದ ಚಿರತೆಗೆ ಅತಿ ವೇಗದಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿಯಾದ ರಭಸಕ್ಕೆ ಚಿರತೆಯ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದೆ. ಚಿರತೆಯ ಮೃತದೇಹವನ್ನು ಕಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.