ಕುಡಿದ ಮತ್ತಿನಲ್ಲಿ ಇಟ್ಟಿಗೆಯಿಂದ ಹೊಡೆದು ವ್ಯಕ್ತಿ ಕೊಲೆ

ನಾಗಮಂಗಲ: ಕುಡಿತದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ನಡೆದು ಇಟ್ಟಿಗೆಯಿಂದ ತಲೆಗೆ ಹೊಡೆದಿದ್ದರಿಂದ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ತಾಲ್ಲೂಕಿನ ದೇವಲಾಪುರ ಗ್ರಾಮದ ಪ್ರಕಾಶ್ (52) ಮೃತ ವ್ಯಕ್ತಿ.

ದೇವಲಾಪುರ ಗ್ರಾಮದಲ್ಲಿ ಬುಧವಾರ ರಾತ್ರಿ ೯ ಗಂಟೆ ಸಮಯದಲ್ಲಿ ಪ್ರಕಾಶ್, ಮುತ್ಸಂದ್ರ ಗ್ರಾಮದ ಬೀರೇಶ್ ನಡುವೆ ಕುಡಿದ ಮತ್ತಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ಸಂದರ್ಭ ವಾಗ್ವಾದ ನಡೆದು ಪ್ರಕಾಶ್ ಬೀರೇಶ್ ತಾಯಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರಿಂದ ಕೋಪಗೊಂಡು ಬೀರೇಶ್ ಇಟ್ಟಿಗೆಯಿಂದ ಹೊಡೆದಿದ್ದಾನೆ.

ಘಟನೆಯಿಂದ ಪ್ರಕಾಶ್ ಗಾಯಗೊಂಡ ಕಾರಣ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ದೂರು ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶ್ವಿನಿ, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

× Chat with us