ಮುಂಬೈ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಮಣಿಪುರ ಬಿಜೆಪಿ ಸರ್ಕಾರಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ, ‘ಮಣಿಪುರ ಫೈಲ್ಸ್’ ಹೆಸರಿನಲ್ಲಿ ಚಲನಚಿತ್ರ ನಿರ್ಮಿಸಬೇಕು ಎಂದು ಶನಿವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ ಸೇನಾ-ಯುಬಿಟಿ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ, ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ದೌರ್ಜನ್ಯಗಳು ಕಾಶ್ಮೀರಕ್ಕಿಂತ ಕೆಟ್ಟದಾಗಿವೆ ಎಂದು ಹೇಳಿದೆ.
ಮೇ 4 ರಂದು ಚಿತ್ರೀಕರಿಸಿದ ವೀಡಿಯೋ ಬುಧವಾರ ಹೊರಬಿದ್ದಿದ್ದು, ಮಣಿಪುರದಲ್ಲಿ ಒಂದು ಸಮುದಾಯದ ಇಬ್ಬರು ಮಹಿಳೆಯರನ್ನು ಇತರ ಸಮುದಾಯದ ಕೆಲವು ಪುರುಷರು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ, ತಾಷ್ಕೆಂಟ್ ಫೈಲ್ಸ್, ದಿ ಕೇರಳ ಸ್ಟೋರಿ ಮತ್ತು ದಿ ಕಾಶ್ಮೀರ್ ಫೈಲ್ಸ್‌ನಂತಹ ಚಲನಚಿತ್ರಗಳನ್ನು ನಿರ್ಮಿಸಲಾಗಿದೆ. ಅದೇ ಜನರು ಈಗ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ‘ಮಣಿಪುರ ಫೈಲ್ಸ್’ ಎಂಬ ಚಲನಚಿತ್ರವನ್ನು ಮಾಡಬೇಕು ಎಂದು ಸಾಮ್ನಾ ಹೇಳಿದೆ.
ಮಣಿಪುರದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದಿದ್ದರೆ ಇಷ್ಟೊತ್ತಿಗೆ ವಜಾ ಮಾಡಲಾಗುತ್ತಿತ್ತು ಎಂದ ಶಿವಸೇನೆ, ಪ್ರಧಾನಿ ಮೋದಿಗೆ ಮಣಿಪುರ ರಾಜಕೀಯವಾಗಿ ಅಮುಖ್ಯವಾಗಿದ್ದು, ಅಲ್ಲಿನ ಪರಿಸ್ಥಿತಿಯನ್ನು ನಿರ್ಲಕ್ಷಿಸುತ್ತಿರುವುದಕ್ಕೆ ಕಾರಣ ಎಂದು ಅದು ಆರೋಪಿಸಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…