BREAKING NEWS

ಇಸ್ರೇಲ್ ನಲ್ಲಿ ಸಿಲುಕಿರುವ ನಂಜನಗೂಡಿನ ಕುಟುಂಬ

ಮೈಸೂರು : ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ಚೇತನ್ ಮತ್ತು ಕುಟುಂಬದವರು ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೆ ಮನೆಯವರಿಗೆ ವೀಡಿಯೋ ಕಾಲ್ ಮೂಲಕ ನಾವು ಸುರಕ್ಷತವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಚೇತನ್ ಪತ್ನಿ ಶಿಲ್ಪಶ್ರೀ ಹಾಗೂ ಒಂದುವರೆ ವರ್ಷದ ಮಗು ಸದ್ಯಕ್ಕೆ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿದ್ದಾರೆ

ನಂಜನಗೂಡು ತಾಲ್ಲೂಕು ದೇವನೂರು ಗ್ರಾಮದ ಚೇತನ್. 2 ವರ್ಷದ ಹಿಂದೆ ಉನ್ನತ ವೈದ್ಯಕೀಯ ಶಿಕ್ಷಣಕ್ಕೆ ಇಸ್ರೇಲ್‌ಗೆ ತೆರಳಿದ್ದಾರೆ

ಇದೀಗ ಇಸ್ರೇಲ್ ನಲ್ಲಿ ನಡೆಯುತ್ತಿರುವ ಯುದ್ಧದ ಭೀತಿಯಿಂದಾಗಿ ಹೆದರಿರುವ ಕುಟುಂಬಸ್ಥರಿಗೆ ನಾವು ಸುರಕ್ಷಿತವಾಗಿದ್ದೇವೆ ಎಂದು ವೀಡಿಯೋ ಕಾಲ್ ಮಾಡಿ ಧೈರ್ಯ ತುಂಬಿದ್ದಾರೆ. ಆದರೂ ಸದ್ಯದ ಸ್ಥಿತಿಯಲ್ಲಿ ಚೇತನ್ ಅವರ ಕುಟುಂಬ ವರ್ಗದವರು ಆತಂಕದಲ್ಲಿದ್ದಾರೆ.

ಇಸ್ರೇಲ್‌ನ ರೆಹೋವಾತ್ ನಗರದಲ್ಲಿ ಸುರಕ್ಷಿತವಾಗಿರುವ ಚೇತನ್ ಹಾಗು ಪತ್ನಿ ಮತ್ತು ಮಗುವನ್ನು ಇಸ್ರೇಲ್ ನ ಅವರ ಇನ್ಸ್ಟಿಟ್ಯೂಟ್ ಕೂಡ ಸುರಕ್ಷಿತವಾಗಿ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಯುದ್ಧದ ವೇಳೆ ಸೈರನ್ ಬಂದಾಗ ಸೇಫ್ಟಿ ರೂಂ ನಲ್ಲಿ ಉಳಿದು ಕೊಳ್ಳುತ್ತಿರುವುದಾಗಿ ತಿಳಿಸಿದ ಚೇತನ್.ನಾವು ಇರುವ ಕಡೆಯೇ ಸೇಫ್ಟಿ ರೂಂ ಇದೆ ಎಂದಿದ್ದಾರೆ

ಇಸ್ರೇಲ್ ನಲ್ಲಿ ಇಷ್ಟೆಲ್ಲಾ ಯುದ್ಧದ ಅವಾಂತರ ನಡೆಯುತ್ತಿದ್ದರೂ ಅಲ್ಲಿದ್ದು ಕೊಂಡು ಆತನೆ ನಮಗೆ ದೈರ್ಯ ಹೇಳುತ್ತಿದ್ದಾನೆ ಆದರೆ ಇದೆಲ್ಲ ನೋಡುತ್ತಿದ್ದರೆ ನಮಗೆ ಧೈರ್ಯ ಸಾಲುತ್ತಿಲ್ಲ ಭಯವಾಗುತ್ತಿದೆ ಎಂದು ದೇವನೂರು ಗ್ರಾಮದಲ್ಲಿರುವ ಚೇತನ್ ಸಹೋದರಿ ಲಾವಣ್ಯ ತಿಳಿಸಿದರು.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago