ಬೆಂಗಳೂರು : ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರವರನ್ನು ಇಳಿಸಿ ಮುಖ್ಯಮಂತ್ರಿ ಆಗುತ್ತಾರೆ. ಈ ವಿಚಾರವನ್ನು ಕಾಂಗ್ರೆಸ್ ಶಾಸಕರೆ ಹೇಳಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.
ಪ್ರಿಯಾಂಕ್ ಖರ್ಗೆಯವರು ತಮ್ಮ ತಂದೆಯವರ ಪ್ರಭಾವ ಬಳಸಿ ಎಲ್ಲೆಲ್ಲೂ ತಮ್ಮ ನಿರ್ಧಾರಗಳೇ ನಡೆಯಲಿ ಎನ್ನುತ್ತಿದ್ದಾರೆ. ಇನ್ನೊಂದೆಡೆ ಮೈಸೂರು ಪ್ರವಾಸದ ಪುಕಾರು ಹಬ್ಬಿಸಿ ಕೆಪಿಸಿಸಿ ಅಧ್ಯಕ್ಷರನ್ನೇ ಸತೀಶ್ ಜಾರಕಿಹೊಳಿಯವರು ಅಲುಗಾಡಿಸಿದ್ದಾರೆ. ಮತ್ತೊಂದು ಕಡೆ, ಕೆಲಸ ಬಿಟ್ಟು ವಿದೇಶಕ್ಕೆ ಹಾರಲು ಇತರ ಸನ್ಮಿತ್ರರು ಸಜ್ಜಾಗಿದ್ದಾರೆ ಎಂದು ಬಿಜೆಪಿ ಎಕ್ಸ್‌ನಲ್ಲಿ ಬರೆದುಕೊಂಡಿದೆ.
ಅವರ ಪಕ್ಷದಲ್ಲಿ ಕತ್ತಲಾದ ಮೇಲಷ್ಟೇ ಚರ್ಚಿಸಬಹುದಾದ ವಿಚಾರ ಮತ್ತು ಲೆಕ್ಕಾಚಾರಗಳ ಮಾತುಕತೆಗೆ ಆಯ್ದ ಆಮಂತ್ರಿತರ ಡಿನ್ನರ್ ಆಯೋಜಿಸಲಾಗುತ್ತದೆ. ಹಣಕಾಸಿನ ಲೆಕ್ಕಾಚಾರಗಳಿರುವಾಗ ಈ ರೀತಿ ಭಿನ್ನಾಭಿಪ್ರಾಯಗಳು ಸಹಜವಾಗಿ ಇರುತ್ತದೆ. ಕಲೆಕ್ಷನ್ ವ್ಯವಹಾರ ಬದಿಗಿಟ್ಟು, ಹೊರರಾಜ್ಯಗಳ ಚುನಾವಣೆಗಳಿಗೆ ಫಂಡ್ ಕಳಿಸಲು ಅಸಾಧ್ಯ ಎಂಬುದನ್ನು ಹೈಕಮಾಂಡ್‍ಗೆ ತಿಳಿಸಿದರೆ ರಾಜ್ಯ ಸರ್ಕಾರ ಸುಲಲಿತವಾಗಿ ನಡೆಯುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ.
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…