BREAKING NEWS

ರಾಜ್ಯದಲ್ಲಿರುವುದು ಏಕಪಕ್ಷ ಸಮ್ಮಿಶ್ರ ಸರ್ಕಾರ : ಬಿಜೆಪಿ ವ್ಯಂಗ್ಯ

ಬೆಂಗಳೂರು : ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರವರನ್ನು ಇಳಿಸಿ ಮುಖ್ಯಮಂತ್ರಿ ಆಗುತ್ತಾರೆ. ಈ ವಿಚಾರವನ್ನು ಕಾಂಗ್ರೆಸ್ ಶಾಸಕರೆ ಹೇಳಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

ಪ್ರಿಯಾಂಕ್ ಖರ್ಗೆಯವರು ತಮ್ಮ ತಂದೆಯವರ ಪ್ರಭಾವ ಬಳಸಿ ಎಲ್ಲೆಲ್ಲೂ ತಮ್ಮ ನಿರ್ಧಾರಗಳೇ ನಡೆಯಲಿ ಎನ್ನುತ್ತಿದ್ದಾರೆ. ಇನ್ನೊಂದೆಡೆ ಮೈಸೂರು ಪ್ರವಾಸದ ಪುಕಾರು ಹಬ್ಬಿಸಿ ಕೆಪಿಸಿಸಿ ಅಧ್ಯಕ್ಷರನ್ನೇ ಸತೀಶ್ ಜಾರಕಿಹೊಳಿಯವರು ಅಲುಗಾಡಿಸಿದ್ದಾರೆ. ಮತ್ತೊಂದು ಕಡೆ, ಕೆಲಸ ಬಿಟ್ಟು ವಿದೇಶಕ್ಕೆ ಹಾರಲು ಇತರ ಸನ್ಮಿತ್ರರು ಸಜ್ಜಾಗಿದ್ದಾರೆ ಎಂದು ಬಿಜೆಪಿ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಅವರ ಪಕ್ಷದಲ್ಲಿ ಕತ್ತಲಾದ ಮೇಲಷ್ಟೇ ಚರ್ಚಿಸಬಹುದಾದ ವಿಚಾರ ಮತ್ತು ಲೆಕ್ಕಾಚಾರಗಳ ಮಾತುಕತೆಗೆ ಆಯ್ದ ಆಮಂತ್ರಿತರ ಡಿನ್ನರ್ ಆಯೋಜಿಸಲಾಗುತ್ತದೆ. ಹಣಕಾಸಿನ ಲೆಕ್ಕಾಚಾರಗಳಿರುವಾಗ ಈ ರೀತಿ ಭಿನ್ನಾಭಿಪ್ರಾಯಗಳು ಸಹಜವಾಗಿ ಇರುತ್ತದೆ. ಕಲೆಕ್ಷನ್ ವ್ಯವಹಾರ ಬದಿಗಿಟ್ಟು, ಹೊರರಾಜ್ಯಗಳ ಚುನಾವಣೆಗಳಿಗೆ ಫಂಡ್ ಕಳಿಸಲು ಅಸಾಧ್ಯ ಎಂಬುದನ್ನು ಹೈಕಮಾಂಡ್‍ಗೆ ತಿಳಿಸಿದರೆ ರಾಜ್ಯ ಸರ್ಕಾರ ಸುಲಲಿತವಾಗಿ ನಡೆಯುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ.

lokesh

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

13 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

13 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

14 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

15 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

15 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

21 hours ago