ಬೆಂಗಳೂರು : ರಾಜ್ಯ ಹೈಕೋರ್ಟ್ ಹಾಲ್‌ನಲ್ಲಿ ವ್ಯಕ್ತಿ ಒಬ್ಬ ವಿಚಾರಣೆ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ ವಿಚಾರಣೆ ನಡೆಸುತ್ತಿತ್ತು.
ಮಧ್ಯಾಹ್ನ 1.15ರ ಸಮಯದಲ್ಲಿ ಕ್ರಮ ಸಂಖ್ಯೆ 26 ರ ಪ್ರಕರಣವನ್ನು ಕೋರ್ಟ್ ಆಫೀಸರ್ ಕೂಗುತ್ತಿದ್ದಂತೆಯೇ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು.
ನೋಡ ನೋಡುತ್ತಿದ್ದಂತೆಯೇ ಆ ವ್ಯಕ್ತಿ ತಾವು ತಂದಿದ್ದ ಹರಿತವಾದ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡಿದ್ದಾರೆ.
ತಕ್ಷಣ ಮುಖ್ಯ ನ್ಯಾಯಮೂರ್ತಿಗಳು ಪೊಲೀಸರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆ ವ್ಯಕ್ತಿಯನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…