BREAKING NEWS

ಹೈಕೋರ್ಟ್‌ ಹಾಲ್‌ನಲ್ಲೇ ನ್ಯಾಯಾಮೂರ್ತಿಗಳ ಮುಂದೆ ಕತ್ತು ಕುಯ್ದುಕೊಂಡ ವ್ಯಕ್ತಿ!

ಬೆಂಗಳೂರು : ರಾಜ್ಯ ಹೈಕೋರ್ಟ್ ಹಾಲ್‌ನಲ್ಲಿ ವ್ಯಕ್ತಿ ಒಬ್ಬ ವಿಚಾರಣೆ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ ವಿಚಾರಣೆ ನಡೆಸುತ್ತಿತ್ತು.

ಮಧ್ಯಾಹ್ನ 1.15ರ ಸಮಯದಲ್ಲಿ ಕ್ರಮ ಸಂಖ್ಯೆ 26 ರ ಪ್ರಕರಣವನ್ನು ಕೋರ್ಟ್ ಆಫೀಸರ್ ಕೂಗುತ್ತಿದ್ದಂತೆಯೇ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು.

ನೋಡ ನೋಡುತ್ತಿದ್ದಂತೆಯೇ ಆ ವ್ಯಕ್ತಿ ತಾವು ತಂದಿದ್ದ ಹರಿತವಾದ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡಿದ್ದಾರೆ.

ತಕ್ಷಣ ಮುಖ್ಯ ನ್ಯಾಯಮೂರ್ತಿಗಳು ಪೊಲೀಸರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆ ವ್ಯಕ್ತಿಯನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

5 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

6 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

7 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

10 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

11 hours ago