ತೆಲಂಗಾಣ : ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಅವರ ಎಸ್ಕಾರ್ಟ್ ಉಸ್ತುವಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೊಹಮ್ಮದ್ ಫಜಲ್ ಅಲಿ (60) ಮೃತ ಎಸ್ಕಾರ್ಟ್ಸ್ ಉಸ್ತುವಾರಿ.
ಆತ್ಮಹತ್ಯೆ ಮಾಡಿಕೊಂಡ ಮೊಹಮ್ಮದ್ ಫಜಲ್ ಅಲಿ ಅವರು ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಅವರ ಬೆಂಗಾವಲು ಉಸ್ತುವಾರಿಯಾಗಿದ್ದರು. ಈ ಘಟನೆ ಬೆಳಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೈದರಾಬಾದ್ ನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೌಟುಂಬಿಕ ಸಮಸ್ಯೆಯಿಂದ ಮೊಹಮ್ಮದ್ ಫಜಲ್ ಅಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರಕರಣ ಇನ್ನೂ ದಾಖಲಾಗಿಲ್ಲ, ದೂರು ದಾಖಲಿಸಲಾಗುತ್ತಿದೆ ಎಂದು ಡಿಸಿಪಿ, ಪಶ್ಚಿಮ ವಲಯ ಹೈದರಾಬಾದ್ ನಗರ ಪೊಲೀಸ್ ಡಿ ಜೋಯಲ್ ಡೇವಿಸ್ ಹೇಳಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…