ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಏಕಾಏಕಿ ಖಾಸಗಿ ಬಸ್ ಹರಿದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಉಳಿದ ಮಕ್ಕಳು ಪಾರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ.
ಘಟನೆಯಿಂದ ಗಾಯಗೊಂಡಿದ್ದ ತುಳಸಿ (15) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೋರ್ವ ಬಾಲಕಿ ನಿವೇದಿತ (14) ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಓವರ್ ಸ್ಪೀಡ್‌ನಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.
ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂ ಆಗಿದೆ. ಅಧಿಕ ವೇಗದ ಖಾಸಗಿ ಬಸ್‌ಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್ಸಿನ ಮೇಲೆ ಕಲ್ಲು ತೂರಾಟ ಮಾಡಿ ಬಸ್‌ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…