ಬಳ್ಳಾರಿ : ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಘಟನೆ ನಡೆದಿದ್ದು, ಸಿರುಗುಪ್ಪದಿಂದ ತೆಕ್ಕಲಕೋಟೆಗೆ ತೆರಳುತ್ತಿದ್ದ ವಿಶ್ವಜ್ಯೋತಿ ಇಂಟರ್ ನ್ಯಾಷನಲ್ ಸ್ಕೂಲ್ ಬಸ್ ಹೊತ್ತಿ ಉರಿದಿದೆ.
ಮೊದಲಿಗೆ ಡಿಸೇಲ್ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಇದನ್ನು ಗಮನಿಸಿ, ಡ್ರೈವರ್‌ಗೆ ತಿಳಿಸಿದ್ದಾರೆ. ತಕ್ಷಣ ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ ಚಾಲಕ ಯಾಸೀನ್, ಎಲ್ಲ ಮಕ್ಕಳನ್ನು ಬಸ್‌ನಿಂದ ಇಳಿಸಿದ್ದಾರೆ.ಮಕ್ಕಳು ಕೆಳಗೆ ಇಳಿಯುತ್ತಿದ್ದಂತೆ ಬಸ್ ಹೊತ್ತಿ ಉರಿದಿದೆ. ವಿದ್ಯಾರ್ಥಿಗಳು, ಚಾಲಕ ಹಾಗೂ ಬಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ.
ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಸಿರಗುಪ್ಪ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…