BREAKING NEWS

ಹೊತ್ತಿ ಉರಿದ ಖಾಸಗಿ ಶಾಲಾ ಬಸ್ ; 50ಕ್ಕೂ ಹೆಚ್ಚು ಮಕ್ಕಳು ಪಾರು

ಬಳ್ಳಾರಿ : ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್‌ ಬದುಕುಳಿದಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಘಟನೆ ನಡೆದಿದ್ದು, ಸಿರುಗುಪ್ಪದಿಂದ ತೆಕ್ಕಲಕೋಟೆಗೆ ತೆರಳುತ್ತಿದ್ದ ವಿಶ್ವಜ್ಯೋತಿ ಇಂಟರ್ ನ್ಯಾಷನಲ್ ಸ್ಕೂಲ್ ಬಸ್ ಹೊತ್ತಿ ಉರಿದಿದೆ.
ಮೊದಲಿಗೆ ಡಿಸೇಲ್ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಇದನ್ನು ಗಮನಿಸಿ, ಡ್ರೈವರ್‌ಗೆ ತಿಳಿಸಿದ್ದಾರೆ. ತಕ್ಷಣ ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ ಚಾಲಕ ಯಾಸೀನ್, ಎಲ್ಲ ಮಕ್ಕಳನ್ನು ಬಸ್‌ನಿಂದ ಇಳಿಸಿದ್ದಾರೆ.ಮಕ್ಕಳು ಕೆಳಗೆ ಇಳಿಯುತ್ತಿದ್ದಂತೆ ಬಸ್‌ ಹೊತ್ತಿ ಉರಿದಿದೆ. ವಿದ್ಯಾರ್ಥಿಗಳು, ಚಾಲಕ ಹಾಗೂ ಬಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ.
ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಸಿರಗುಪ್ಪ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

1 min ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago